TSK

TSK · ಅಪೊಸ್ತಲರ ಕೃತ್ಯಗ 17:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

“ನಿಮ್ಮನ್ನು ಹಿಂದಟ್ಟುವವರಿಗೆ ನೀವು ಸಿಕ್ಕದಂತೆ ಆ ಬೆಟ್ಟಕ್ಕೆ ಓಡಿ ಹೋಗಿ ಅಲ್ಲಿ ಮೂರು ದಿನ ಅಡಗಿಕೊಂಡಿದ್ದು, ತರುವಾಯ ಅವರು ಹಿಂದಿರುಗಿದ ಮೇಲೆ ನಿಮ್ಮ ದಾರಿ ಹಿಡಿದು ಹೋಗಿರಿ” ಎಂದಳು.

ಆದರೆ ಸೌಲನ ಶಿಷ್ಯರು ರಾತ್ರಿಕಾಲದಲ್ಲಿ ಅವನನ್ನು ಕರೆದುಕೊಂಡುಹೋಗಿ, ಒಂದು ಪುಟ್ಟಿಯಲ್ಲಿ ಕುಳ್ಳಿರಿಸಿ, ಗೋಡೆಯ ಮಗ್ಗುಲಲ್ಲಿ ಇಳಿಸಿದರು.

¶ ಆಗ ಅಪೊಸ್ತಲರೂ, ಸಭೆಯ ಹಿರಿಯರೂ ಸರ್ವಸಭೆಯ ಅನುಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಮತ್ತು ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವುದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ, ಸೀಲನನ್ನೂ ಆರಿಸಿಕೊಂಡು,

¶ ಆ ಸಹೋದರರು ರಾತ್ರಿಯಲ್ಲಿ ಪೌಲ ಮತ್ತು ಸೀಲರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು. ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.

ಅಲ್ಲಿ ಮೂರು ತಿಂಗಳು ಕಳೆದ ನಂತರ ಸಿರಿಯ ದೇಶಕ್ಕೆ ಸಮುದ್ರಮಾರ್ಗವಾಗಿ ಹೋಗಬೇಕೆಂದಿದ್ದಾಗ ಅವನಿಗೆ ವಿರುದ್ಧವಾಗಿ ಯೆಹೂದ್ಯರು ಒಳಸಂಚುಮಾಡಿದ್ದು ಅವನಿಗೆ ತಿಳಿದು ಬಂದ್ದುದರಿಂದ ಅವನು ಮಕೆದೋನ್ಯದ ಮಾರ್ಗವಾಗಿ ಹಿಂತಿರುಗಿ ಹೋಗುವುದಕ್ಕೆ ತೀರ್ಮಾನಿಸಿದನು.

¶ ಕ್ರೇತ್ ದ್ವೀಪದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವ ಕಾರ್ಯಗಳನ್ನು ಕ್ರಮಪಡಿಸಿ, ಪಟ್ಟಣ ಪಟ್ಟಣಗಳಲ್ಲಿ ಹಿರಿಯರನ್ನು ನೇಮಿಸಬೇಕೆಂದು ನಾನು ನಿನಗೆ ಅಪ್ಪಣೆಕೊಟ್ಟು ನಿನ್ನನ್ನು ಅಲ್ಲಿ ಬಿಟ್ಟು ಬಂದೆ.