TSK

TSK · ಅಪೊಸ್ತಲರ ಕೃತ್ಯಗ 17:25

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರು ಬೋರಲುಬಿದ್ದು, “ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ, ಇವರಲ್ಲಿ ದೋಷಿಯಾದವನು ಒಬ್ಬನೇ ಆಗಿರಲಾಗಿ ಸರ್ವಸಮೂಹದವರೆಲ್ಲರ ಮೇಲೆ ಕೋಪಗೊಳ್ಳಬಹುದೋ?” ಎಂದು ಬಿನ್ನೈಸಿದನು.

ಪ್ರತಿ ಪ್ರಾಣಿಯ ಪ್ರಾಣವು, ಸಮಸ್ತ ಮನುಷ್ಯರ ಆತ್ಮಗಳೂ ಯೆಹೋವನ ಕೈಯಲ್ಲಿರುವವು.

ನನ್ನ ನ್ಯಾಯವನ್ನು ತಪ್ಪಿಸಿದ ದೇವರಾಣೆ, ನನ್ನ ಆತ್ಮವನ್ನು ವ್ಯಥೆಪಡಿಸಿರುವ ಸರ್ವಶಕ್ತನಾದ ದೇವರಾಣೆ,

ಆತನು ಸ್ವಾರ್ಥದಲ್ಲಿ ಮನಸ್ಸಿಟ್ಟು ತನ್ನ ಆತ್ಮವನ್ನೂ, ಶ್ವಾಸವನ್ನೂ ಹಿಂದಕ್ಕೆ ತೆಗೆದುಕೊಳ್ಳುವುದಾದರೆ,

ನಾನು ಯೆಹೋವನನ್ನು ಕುರಿತು, “ನೀನೇ ನನ್ನ ಒಡೆಯನು; ನನ್ನ ಸುಖವು ನಿನ್ನಲ್ಲಿಯೇ ಹೊರತು ಬೇರೆ ಇಲ್ಲ” ಎಂದು ಹೇಳುವೆನು.

ಇವುಗಳು ಹೊತ್ತುಹೊತ್ತಿಗೆ ಆಹಾರಕ್ಕೋಸ್ಕರ ನಿನ್ನನ್ನೇ ನಿರೀಕ್ಷಿಸುತ್ತವೆ.

ನಾನು ಸರ್ವದಾ ವ್ಯಾಜ್ಯವಾಡುವುದಿಲ್ಲ, ಕಡೆಯ ತನಕ ಕೋಪಿಸಿಕೊಳ್ಳೆನು, ಹೀಗೆ ಮಾಡಿದರೆ ಮನುಷ್ಯನ ಆತ್ಮವೂ, ನಾನು ಸೃಷ್ಟಿಸಿದ ಜೀವವೂ ನನ್ನಿಂದ ಕುಂದಿಹೋದಾವು.

“ನಿಮ್ಮ ಜಾತ್ರೆಗಳನ್ನು ಹಗೆಮಾಡುತ್ತೇನೆ, ತುಚ್ಛೀಕರಿಸುತ್ತೇನೆ, ನಿಮ್ಮ ಉತ್ಸವಗಳ ವಾಸನೆಯೇ ನನಗೆ ಬೇಡ.

‹ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ. ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.›

ಆದರೆ ದೇವರು ತನ್ನ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಮೂಲಕ ಸಾಕ್ಷಿ ನೀಡುತ್ತಲೇ ಬಂದಿದ್ದಾನೆ; ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ, ಸುಗ್ಗಿಕಾಲಗಳನ್ನೂ ದಯಪಾಲಿಸಿ, ಆಹಾರ ಕೊಟ್ಟು ನಿಮ್ಮ ಮನಸ್ಸುಗಳನ್ನು ಆನಂದದಿಂದ ತುಂಬಿಸಿ, ಉಪಕಾರಮಾಡುತ್ತಾ ಬಂದವನು ಆತನೇ” ಎಂದು ಹೇಳಿದರು.

ಮುಂಗಡವಾಗಿ ಆತನಿಗೆ ಕೊಟ್ಟು ಆನಂತರ ಪ್ರತಿಫಲವನ್ನು ತೆಗೆದುಕೊಳ್ಳುವವನು ಯಾರು?”