TSK

TSK · ಅಪೊಸ್ತಲರ ಕೃತ್ಯಗ 17:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.

ಯೆರೆಮೀಯನು ಸಮಸ್ತ ಜನರಿಗೆ, “ಯೆಹೋವನು ಇಂತೆನ್ನುತ್ತಾನೆ, ಪಟ್ಟಣದಲ್ಲಿ ನಿಲ್ಲುವವನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವನು; ಪಟ್ಟಣವನ್ನು ಬಿಟ್ಟುಹೋಗಿ ಕಸ್ದೀಯರನ್ನು ಮೊರೆಹೋಗುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಉಳಿಸಿಕೊಂಡು ಹೋಗಿ ಬದುಕುವನು.

‹ಇದಲ್ಲದೆ›‹ರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವುದು; ಆಗ ಅಂತ್ಯವು ಬರುವುದು.›

ಅವರು ಜನರನ್ನೂ, ಹಿರಿಯರನ್ನೂ, ಶಾಸ್ತ್ರಿಗಳನ್ನೂ ಪ್ರಚೋದಿಸಿದರು ಮತ್ತು ಅವನನ್ನು ಹಿಡಿದು, ಎಳೆದುಕೊಂಡು, ಹಿರೀಸಭೆಗೆ ತೆಗೆದುಕೊಂಡು ಹೋಗಿ ಅವನಿಗೆ ವಿರುದ್ಧವಾಗಿ ಸುಳ್ಳುಸಾಕ್ಷಿಗಳನ್ನು ಕರತಂದು ನಿಲ್ಲಿಸಿದರು.

¶ ಗಲ್ಲಿಯೋನನು ಅಖಾಯ ಪ್ರಾಂತ್ಯಕ್ಕೆ ಅಧಿಪತಿಯಾಗಿರಲು ಯೆಹೂದ್ಯರು ಒಗ್ಗಟ್ಟಾಗಿ ಪೌಲನ ಮೇಲೆ ಬಿದ್ದು ಅವನನ್ನು ನ್ಯಾಯಾಸ್ಥಾನದ ಮುಂದೆ ಹಿಡಿದು ತಂದು;

¶ ಅಲ್ಲಿಯವರೆಗೆ ಪೌಲನ ಮಾತುಗಳನ್ನು ಅವರು ಕೇಳಿಸಿಕೊಳ್ಳುತ್ತಿದ್ದರು. ಆನಂತರ; “ಇಂಥವನನ್ನು ಭೂಮಿಯಿಂದ ತೆಗೆದುಹಾಕಿಬಿಡು; ಇವನು ಬದುಕುವುದು ಯುಕ್ತವಲ್ಲವೆಂದು” ಕೂಗಿ ಹೇಳಿದರು.

ಆದರೆ, ನಿನ್ನ ಅಭಿಪ್ರಾಯವನ್ನು ನಿನ್ನಿಂದಲೇ ಕೇಳುವುದು ನಮಗೆ ಯುಕ್ತವೆಂದು ತೋರುತ್ತದೆ. ಆ ಪಂಥದ ವಿಷಯದಲ್ಲಿ ಜನರು ಎಲ್ಲೆಲ್ಲಿಯೂ ವಿರುದ್ಧವಾಗಿ ಮಾತನಾಡುತ್ತಾರೆಂಬದೊಂದೇ ನಮಗೆ ಗೊತ್ತದೆ” ಅಂದರು.