¶ ಅದಲ್ಲದೆ ನೀವು ಬಿತ್ತಿದ ಹೊಲದಲ್ಲಿ ಪ್ರಥಮಫಲವು ದೊರೆತಾಗ ಸುಗ್ಗಿಯ ಹಬ್ಬವನ್ನು ಆಚರಿಸಬೇಕು. ಹೊಲ ತೋಟಗಳ ಬೆಳೆಯನ್ನೂ ಕೂಡಿಸುವಾಗ ಅಂದರೆ ವರ್ಷದ ಕೊನೆಯಲ್ಲಿ ಸುಗ್ಗಿ ಹಬ್ಬವನ್ನು ಆಚರಿಸಬೇಕು.
TSK
TSK · ಅಪೊಸ್ತಲರ ಕೃತ್ಯಗ 2:1
Treasury of Scripture Knowledge references in ಕನ್ನಡ IRV.
¶ “‘ಸಬ್ಬತ್ ದಿನದ ಮರುದಿನದಿಂದ ಆ ಪ್ರಥಮ ಸಿವುಡನ್ನು ನೈವೇದ್ಯವಾಗಿ ನಿವಾಳಿಸಿದ ದಿನ ಮೊದಲುಗೊಂಡು ಪೂರ್ಣವಾಗಿ ಏಳು ವಾರಗಳು ಮುಗಿಯುವಂತೆ ಐವತ್ತು ದಿನಗಳನ್ನು ಲೆಕ್ಕಿಸಬೇಕು.
¶ ಬೆಳೆ ಕೊಯ್ಯುವುದಕ್ಕೆ ಕುಡುಗೋಲು ಹಾಕುವ ಕಾಲ ಮೊದಲುಗೊಂಡು ಏಳು ವಾರಗಳನ್ನು ಎಣಿಸಿ,
ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ ಪ್ರೇರಣೆಹೊಂದಿ ಏಕ ಮನಸ್ಸುಳ್ಳವರಾಗಿ, ಯೆಹೋವನ ವಾಕ್ಯಕ್ಕೆ ಅನುಸಾರವಾಗಿ ಅರಸನಿಂದಲೂ, ಪದಾಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.
ನಾನು ಅವರ ಹಿತವನ್ನೂ, ಅವರ ತರುವಾಯ ಅವರ ಮಕ್ಕಳ ಹಿತವನ್ನೂ ಬಯಸುತ್ತಾ ಅವರು ಸದಾ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರುವಂತೆ ಎಲ್ಲರಿಗೂ ಒಂದೇ ಮನಸ್ಸನ್ನೂ, ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು.
ಅವರು ಅಲ್ಲಿಗೆ ಬಂದು ತಾವು ವಾಸಮಾಡುತ್ತಿದ್ದ ಮೇಲಂತಸ್ತಿಗೆ ಹೋದರು; ಅವರು ಯಾರಾರೆಂದರೆ, ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಾಕೋಬ, ಮತಾಭಿಮಾನಿ ಎನಿಸಿಕೊಂಡ ಸೀಮೋನ, ಯಾಕೋಬನ ಸಹೋದರನಾದ ಯೂದ, ಇವರೇ.
ಅವರು ಕೇಳಿ ಏಕಮನಸ್ಸು ಉಳ್ಳವರಾಗಿ ದೇವರನ್ನು ಗಟ್ಟಿಯಾದ ಧ್ವನಿಯಿಂದ ಹೀಗೆ ಪ್ರಾರ್ಥಿಸಿದರು;, “ಕರ್ತನೇ, ಭೂಮ್ಯಾಕಾಶಗಳನ್ನೂ, ಸಮುದ್ರಗಳನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಉಂಟುಮಾಡಿದಾತನೇ,
¶ ಇದಲ್ಲದೆ ಅಪೊಸ್ತಲರ ಕೈಯಿಂದ ಅನೇಕ ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ಜನರೊಳಗೆ ನಡೆಯುತ್ತಾ ಇದ್ದವು. ಮತ್ತು ಎಲ್ಲರು ಒಗ್ಗಟ್ಟಾಗಿ ಸೊಲೊಮೋನನ ಮಂಟಪದಲ್ಲಿ ಸೇರಿಬರುತ್ತಿದ್ದರು.
ಹೀಗೆ ನೀವು ಏಕಮನಸ್ಸಿನಿಂದ ಒಕ್ಕೊರಳಿನಿಂದ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಕೊಂಡಾಡುವಿರಿ.
¶ ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಏಕಮನಸ್ಸಿನಿಂದ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.