TSK

TSK · ಅಪೊಸ್ತಲರ ಕೃತ್ಯಗ 2:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅದರ ಜೊತೆಗೆ ದೇಶಾಂತರ ವ್ಯಾಪಾರಿಗಳೂ, ವರ್ತಕರೂ, ಅರಬಿಯ ಅರಸರೂ, ಪ್ರದೇಶಾಧಿಪತಿಗಳೂ ಸಹ ಸೊಲೊಮೋನನಿಗೆ ಬೆಳ್ಳಿ ಬಂಗಾರವನ್ನು ಕೊಡುತ್ತಿದ್ದರು.

ಫಿಲಿಷ್ಟಿಯರೊಡನೆ ಗೂರ್ ಬಾಳಿನಲ್ಲಿರುವ ಅರಬಿಯರೊಡನೆ ಹಾಗು ಮೆಗೂನ್ಯರೊಡನೆ ಯುದ್ಧ ಮಾಡಿದಾಗ ಯೆಹೋವನು ಅವನಿಗೆ ಸಹಾಯ ಮಾಡಿದನು.

ನಿನ್ನ ಅದ್ಭುತಕೃತ್ಯಗಳ ವರ್ಣನೆಯ ಸ್ತೋತ್ರ ಮಾಡುತ್ತಾ, ನಿನ್ನ ಯಜ್ಞವೇದಿಯನ್ನು ಪ್ರದಕ್ಷಿಣೆಮಾಡುವೆನು.

ದೇವರೇ, ನೀನು ಬಾಲ್ಯದಿಂದಲೂ ನನ್ನನ್ನು ಉಪದೇಶಿಸುತ್ತಾ ಬಂದಿದ್ದಿ. ನಾನು ನಿನ್ನ ಅದ್ಭುತಕೃತ್ಯಗಳನ್ನು ಇಂದಿನ ವರೆಗೂ ಪ್ರಚುರಪಡಿಸುತ್ತಿದ್ದೇನೆ.

ಯೆಹೋವನ ಘನತೆಯನ್ನು, ಆತನ ಪರಾಕ್ರಮವನ್ನು, ಅದ್ಭುತಕೃತ್ಯಗಳನ್ನು ಮುಂದಣ ಸಂತತಿಯವರಿಗೆ ವಿವರಿಸುವೆವು.

ಜನಾಂಗಗಳಲ್ಲಿ ಆತನ ಘನತೆಯನ್ನೂ, ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಪಡಿಸಿರಿ.

ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ.

ಆತನು ತನ್ನ ಅದ್ಭುತಕೃತ್ಯಗಳ ಜ್ಞಾಪಕವನ್ನು ಉಳಿಯಮಾಡಿದ್ದಾನೆ. ಯೆಹೋವನು ಕೃಪೆಯೂ, ಕನಿಕರವೂ ಉಳ್ಳವನು.

ಅದು ಎಂದಿಗೂ ನಿವಾಸ ಸ್ಥಳವಾಗದು. ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಯಾವ ಅರಬಿಯನೂ ಗುಡಾರ ಹಾಕನು ಅಥವಾ ಕುರುಬರು ಮಂದೆಯನ್ನು ತಂಗಿಸರು.

ಯೆಹೋವನೇ, ನೀನೇ ನನ್ನ ದೇವರು; ನೀನು ಸತ್ಯ ಪ್ರಾಮಾಣಿಕತೆಗಳನ್ನು ಅನುಸರಿಸಿ, ಆದಿ ಸಂಕಲ್ಪಗಳನ್ನು ನೆರವೇರಿಸುತ್ತಾ, ಅದ್ಭುತಗಳನ್ನು ನಡೆಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿಸುವೆನು.

ಕಣ್ಣೆತ್ತಿ ಬೋಳು ಗುಡ್ಡಗಳನ್ನು ನೋಡು, ಯಾವುದರಲ್ಲಿ ನಿನ್ನನ್ನು ನೀನು ಕೆಡಿಸಿಕೊಳ್ಳಲಿಲ್ಲ? ಅರಬಿಯನು ಅಡವಿಯಲ್ಲಿ ಹೊಂಚುಹಾಕುವ ಹಾಗೆ ನೀನು ದಾರಿಯ ಮಗ್ಗುಲಲ್ಲಿ ಅವರಿಗಾಗಿ ಹೊಂಚು ಹಾಕುತ್ತಾ ಕುಳಿತಿದ್ದಿ; ನಿನ್ನ ವ್ಯಭಿಚಾರದಿಂದಲೂ, ನಿನ್ನ ಕೆಟ್ಟತನದಿಂದಲೂ ದೇಶವನ್ನು ಅಪವಿತ್ರಮಾಡಿದ್ದಿ.

ಪರಾತ್ಪರನಾದ ದೇವರು ನನ್ನ ವಿಷಯದಲ್ಲಿ ನಡೆಸಿರುವ ಮಹತ್ತುಗಳನ್ನೂ, ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬುವುದು ನನಗೆ ಸ್ಪಷ್ಟವಾಗಿ ತೋರಿಬಂದಿದೆ.

¶ ಆ ಬಂದರು ಪ್ರದೇಶ; ಚಳಿಗಾಲವನ್ನು ಕಳೆಯುವುದಕ್ಕೆ ಅನುಕೂಲವಲ್ಲವಾದುದರಿಂದ, ಅಲ್ಲಿಂದ ಹೊರಟು ಸಾಧ್ಯವಾದರೆ ಹೇಗೂ ಫೊಯಿನಿಕ್ಸ ಊರನ್ನು ಸೇರಿ, ಅಲ್ಲೇ ಆ ಚಳಿಗಾಲವನ್ನು ಕಳೆಯಬೇಕೆಂದು ಹೆಚ್ಚು ಜನರು ತಮ್ಮ ಅಭಿಪ್ರಾಯಗಳನ್ನು ಹೇಳಿದರು. ಫೊಯಿನಿಕ್ಸವು ಕ್ರೇತ ದ್ವೀಪದ ಒಂದು ಬಂದರು ಪ್ರದೇಶ, ಈಶಾನ್ಯ ದಿಕ್ಕಿಗೂ, ಆಗ್ನೇಯ ದಿಕ್ಕಿಗೂ ಅಭಿಮುಖವಾಗಿದೆ.

ದೇವರು ತನ್ನ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ ಮಹತ್ಕಾರ್ಯ ಮಾಡುವ ಶಕ್ತಿಯನ್ನು, ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ.

ಹಾಗರಳು ಅಂದರೆ ಅರಬಸ್ಥಾನದಲ್ಲಿರುವ ಸೀನಾಯಿ ಪರ್ವತವನ್ನು ಸೂಚಿಸುವಂತಹದ್ದು ಈಗಿನ ಯೆರೂಸಲೇಮಿಗೆ ಎಂಬುವಳಿಗೆ ಹೋಲಿಕೆಯಾಗಿದ್ದಾಳೆ, ಏಕೆಂದರೆ ಆಕೆಯು ತನ್ನ ಮಕ್ಕಳೊಂದಿಗೆ ಈಗ ದಾಸತ್ವದಲ್ಲಿದ್ದಾಳೆ.

“ಕ್ರೇತ್ ದ್ವೀಪದವರು ಯಾವಾಗಲೂ ಸುಳ್ಳುಗಾರರೂ, ದುಷ್ಟಮೃಗಗಳೂ, ಸೋಮಾರಿಗಳಾದ ಹೊಟ್ಟೆಬಾಕರೂ” ಆಗಿದ್ದಾರೆಂದು ಅವರ ಸ್ವಂತ ಪ್ರವಾದಿಗಳಲ್ಲಿಯೇ ಒಬ್ಬ ಪ್ರವಾದಿಯು ಹೇಳಿದ್ದಾನೆ.