ಪೂರ್ವಕಾಲದಲ್ಲೂ ನಾನು ನನ್ನ ಜನರಾದ ಇಸ್ರಾಯೇಲರಿಗಾಗಿ ನೇಮಿಸಿದ ನ್ಯಾಯಸ್ಥಾಪಕರ ಕಾಲದಿಂದ ಇಲ್ಲಿಯವರೆಗೂ ದುಷ್ಟರು ಅವರನ್ನು ಕುಗ್ಗಿಸಿದಂತೆ ಇನ್ನು ಕುಗ್ಗಿಸುವುದಿಲ್ಲ. ನೀನು ಶತ್ರುಭಯವಿಲ್ಲದೆ ನೆಮ್ಮದಿಯಿಂದಿರುವಂತೆ ಮಾಡುವೆನು. ಇದಲ್ಲದೆ ಯೆಹೋವನಾದ ನಾನು ನಿನಗೋಸ್ಕರ ಒಂದು ಮನೆಯನ್ನು ಕಟ್ಟುವೆನೆಂದು ಮಾತು ಕೊಡುತ್ತೇನೆ.
TSK
TSK · ಅಪೊಸ್ತಲರ ಕೃತ್ಯಗ 2:30
Treasury of Scripture Knowledge references in ಕನ್ನಡ IRV.
ನಿನ್ನ ಆಯುಷ್ಕಾಲವು ಮುಗಿದು ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ, ನಿನ್ನ ಮಕ್ಕಳಲ್ಲಿ ಒಬ್ಬನನ್ನು ಅಭಿವೃದ್ಧಿಪಡಿಸಿ, ಅವನ ರಾಜ್ಯವನ್ನು ಸ್ಥಿರಪಡಿಸುವೆನು.
ದೇವರೇ, ಅರಸನಿಗೆ ನಿನ್ನ ನ್ಯಾಯವನ್ನು; ರಾಜಕುಮಾರನಿಗೆ ನಿನ್ನ ನೀತಿಯನ್ನು ಅನುಗ್ರಹಿಸು.
ಆ ಕಾಲದಲ್ಲಿ ನೀನು ದರ್ಶನದಲ್ಲಿ ನಿನ್ನ ಭಕ್ತರಿಗೆ ಹೇಳಿದ್ದೇನೆಂದರೆ, “ಒಬ್ಬ ಶೂರನಿಗೆ ರಕ್ಷಾಬಲವನ್ನು ಅನುಗ್ರಹಿಸಿದ್ದೇನೆ; ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತಸ್ಥಾನದಲ್ಲಿಟ್ಟಿದ್ದೇನೆ.
ಯೆಹೋವನು ದಾವೀದನಿಗೆ ಮಾಡಿದ ಪ್ರಮಾಣವು ಸ್ಥಿರವಾಗಿದೆ; ಆತನು ಅದನ್ನು ಬದಲಿಸುವುದಿಲ್ಲ. “ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು;
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.
¶ ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನು ಇಸ್ರಾಯೇಲ್ ಮತ್ತು ಯೆಹೂದ ವಂಶಗಳ ವಿಷಯವಾಗಿ ನುಡಿದಿರುವ ಶುಭವಾಕ್ಯವನ್ನು ನೆರವೇರಿಸುವ ದಿನಗಳು ಬರುವವು.
ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು.
ಬಳಿಕ ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಪಾಲುಮಾಡಿಕೊಂಡರು;
ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸುವೆಂದು ಹೆಸರಿಡಬೇಕು.
ಆ ದೂತನು ಅವರಿಗೆ, “ಹೆದರಬೇಡಿರಿ, ಕೇಳಿರಿ; ಜನರಿಗೆಲ್ಲಾ ಮಹಾ ಸಂತೋಷವನ್ನುಂಟುಮಾಡುವ ಶುಭವಾರ್ತೆಯನ್ನು ನಿಮಗೆ ತಿಳಿಸುತ್ತೇನೆ.
ಯೇಸು, ‹“ನನ್ನ ರಾಜ್ಯವು ಈ ಲೋಕದ್ದಲ್ಲ. ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರ ಕೈಗೆ ಒಪ್ಪಿಸಲ್ಪಡದಂತೆ ನನ್ನ ಸೇವಕರು ನನ್ನ ಪರವಾಗಿ ಹೋರಾಡುತ್ತಿದ್ದರು, ಆದರೆ ನನ್ನ ರಾಜ್ಯವು ಇಲ್ಲಿಯದಲ್ಲ”› ಎಂದು ಉತ್ತರಕೊಟ್ಟನು.
ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ.
ಸತ್ತವರೊಳಗಿಂದ ಎಬ್ಬಿಸಲ್ಪಟ್ಟವನೂ ದಾವೀದನ ವಂಶದವನೂ ಆಗಿರುವ ಯೇಸು ಕ್ರಿಸ್ತನನ್ನು ಜ್ಞಾಪಕಮಾಡಿಕೋ, ಇದೇ ನಾನು ಸಾರುವ ಸುವಾರ್ತೆ.
ಪುನಃ ಬಹುಕಾಲದ ನಂತರ ಆತನು ದಾವೀದನ ಮೂಲಕ ‘ಈ ಹೊತ್ತೇ’ ಎಂದು ಬೇರೊಂದು ದಿನವನ್ನು ಗೊತ್ತುಮಾಡಿದ್ದಾನೆ. ಹೇಗೆಂದರೆ, “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಡುವುದಾದರೆ, ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ!” ಎಂದು ಹೇಳುತ್ತಾನಷ್ಟೆ.
¶ ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದನು. ಈತನು ರಾಜರನ್ನು ಸಂಹಾರ ಮಾಡಿ ಹಿಂದಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶೀರ್ವದಿಸಿದನು.
ಏಕೆಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ. ಆದರೆ ಮನುಷ್ಯರು ಪವಿತ್ರಾತ್ಮಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತನಾಡಿರುವುದು.
ಆತನ ವಸ್ತ್ರದ ಮೇಲೂ, ತೊಡೆಯ ಮೇಲೂ “ರಾಜಾಧಿರಾಜನೂ ಕರ್ತಾಧಿ ಕರ್ತನೂ” ಎಂಬ ಹೆಸರು ಬರೆದಿದೆ.