TSK

TSK · ಅಪೊಸ್ತಲರ ಕೃತ್ಯಗ 2:36

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯಾಕೋಬನ ಮನೆತನವೇ, ಇಸ್ರಾಯೇಲ್ ವಂಶದ ಸಕಲ ಗೋತ್ರಗಳೇ, ಯೆಹೋವನ ವಾಕ್ಯವನ್ನು ಕೇಳಿರಿ;

¶ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಮತ್ತು ಯೆಹೂದ ವಂಶದವರೊಂದಿಗೂ ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು.

¶ “‘ಆಗ ಅವರು ತಮ್ಮ ದೇವರಾದ ಯೆಹೋವನೆಂಬ ನಾನು ತಮ್ಮೊಂದಿಗೆ ಇದ್ದೇನೆಂತಲೂ, ಇಸ್ರಾಯೇಲ್ ವಂಶದವರಾದ ತಾವು ತನ್ನ ಜನರಾಗಿದ್ದೇವೆಂತಲೂ ತಿಳಿದುಕೊಳ್ಳುವರು’” ಇದು ಕರ್ತನಾದ ಯೆಹೋವನ ನುಡಿ.

¶ ಆ ದಿನದಲ್ಲಿ ಪಾಪವನ್ನೂ, ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ, ಯೆರೂಸಲೇಮಿನವರಿಗೂ ತೆರೆದಿರುವುದು.

ಅದೇನೆಂದರೆ, ಈ ಹೊತ್ತು ನಿಮಗೋಸ್ಕರ ದಾವೀದನೂರಲ್ಲಿ ಒಬ್ಬ ರಕ್ಷಕನು ಹುಟ್ಟಿದ್ದಾನೆ. ಆತನು ಕರ್ತನಾಗಿರುವ ಕ್ರಿಸ್ತನೇ.

‹ಇದಲ್ಲದೆ ತಂದೆಯು ಯಾರಿಗೂ ತೀರ್ಪುಮಾಡುವುದಿಲ್ಲ, ಆದರೆ ಎಲ್ಲಾ ತೀರ್ಪನ್ನು ಮಗನಿಗೆ ಕೊಟ್ಟಿದ್ದಾನೆ.›

¶ “ಮನೆಕಟ್ಟುವವರಾದ ನೀವು ಬೇಡವೆಂದು ಬಿಟ್ಟಕಲ್ಲೇ ಆತನು; ಆತನೇ ಬಹು ಮುಖ್ಯವಾದ ಮೂಲೆಗಲ್ಲಾದನು.

ಎಲ್ಲಾ ಜನರಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನದ ಶುಭಸಮಾಚಾರವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ಅನುಗ್ರಹಿಸಿದ ವಾಕ್ಯವು ನಿಮಗೇ ತಿಳಿದಿದೆ.

ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತನವರೇ.

ಯೇಸು ಕರ್ತನು ತನ್ನ ಶಕ್ತಿಯುತ ದೇವದೂತರೊಂದಿಗೆ ಅಗ್ನಿ ಜ್ವಾಲೆಗಳ ಮೂಲಕ ಪರಲೋಕದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು.