TSK

TSK · ಅಪೊಸ್ತಲರ ಕೃತ್ಯಗ 2:46

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅಲ್ಲಿಯೇ ಆತನ ಸನ್ನಿಧಿಯಲ್ಲಿ ಊಟಮಾಡಿ, ನಿಮ್ಮ ದೇವರಾದ ಯೆಹೋವನು ನಿಮ್ಮ ಪ್ರಯತ್ನಗಳನ್ನು ಕೈಗೂಡುವಂತೆ ಮಾಡಿದ್ದಕ್ಕಾಗಿ ನೀವೂ ಮತ್ತು ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು.

ಮತ್ತು ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು.

ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನಿನ್ನ ಸತ್ಯತೆಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡು ನಡೆಯುವೆನು. ನಾನು ನಿನ್ನ ನಾಮದಲ್ಲಿ ಭಯಭಕ್ತಿಯಿಂದಿರುವಂತೆ ಏಕಮನಸ್ಸನ್ನು ಅನುಗ್ರಹಿಸು.

¶ ‹“ಕಣ್ಣು ದೇಹಕ್ಕೆ ದೀಪವಾಗಿದೆ; ಹೀಗಿರುವುದರಿಂದ ನಿನ್ನ ಕಣ್ಣು ಚೆನ್ನಾಗಿದ್ದರೆ ನಿನ್ನ ದೇಹವೆಲ್ಲಾ ಬೆಳಕಾಗಿರುವುದು.›

ಆತನು ಅವರ ಸಂಗಡ ಊಟಕ್ಕೆ ಕುಳಿತುಕೊಂಡಾಗ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ, ಮುರಿದು ಅವರಿಗೆ ಕೊಡುತ್ತಿರಲಾಗಿ,

ಅವರು ಅಲ್ಲಿಗೆ ಬಂದು ತಾವು ವಾಸಮಾಡುತ್ತಿದ್ದ ಮೇಲಂತಸ್ತಿಗೆ ಹೋದರು; ಅವರು ಯಾರಾರೆಂದರೆ, ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಾಕೋಬ, ಮತಾಭಿಮಾನಿ ಎನಿಸಿಕೊಂಡ ಸೀಮೋನ, ಯಾಕೋಬನ ಸಹೋದರನಾದ ಯೂದ, ಇವರೇ.

¶ ಒಂದು ದಿನ ಪೇತ್ರ ಮತ್ತು ಯೋಹಾನನು ಮಧ್ಯಾಹ್ನದ ಮೇಲೆ ಮೂರು ಘಂಟೆಗೆ ನಡೆಯತ್ತಿದ್ದ ಪ್ರಾರ್ಥನೆಗಾಗಿ ದೇವಾಲಯಕ್ಕೆ ಹೋದರು.

ಹಿರೀಸಭೆಯ ಎದುರಿನಿಂದ ಹೊರಟುಹೋಗಿ, ಪ್ರತಿದಿನ ಎಡೆಬಿಡದೆ ದೇವಾಲಯದಲ್ಲಿಯೂ, ಮನೆಮನೆಗಳಲ್ಲಿಯೂ, ಉಪದೇಶಮಾಡುತ್ತಾ ಕ್ರಿಸ್ತನಾದ ಯೇಸುವಿನ ಕುರಿತು ಶುಭವರ್ತಮಾನವನ್ನು ಸಾರುತ್ತಾ ಇದ್ದರು.

¶ ವಾರದ ಮೊದಲನೆಯ ದಿನದಲ್ಲಿ ನಾವು ರೊಟ್ಟಿ ಮುರಿಯುವ ನಿಯಮಕ್ಕಾಗಿ ಸೇರಿಬಂದಾಗ ಪೌಲನು ಅಲ್ಲಿ ನೆರೆದಂತಹ ವಿಶ್ವಾಸಿಗಳಿಗೆ ಬೋಧನೆಮಾಡಿದನು. ಮರುದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಬೋಧಿಸುತ್ತಾ ಮಧ್ಯರಾತ್ರಿಯವರೆಗೂ ಉಪನ್ಯಾಸವನ್ನು ನೀಡಿದನು.

ನಾನು ಕೃತಜ್ಞತೆಯೊಡನೆ ಊಟಮಾಡಿ ದೇವರನ್ನು ಸ್ತುತಿಸಿದ ಮೇಲೆ ಆ ಪದಾರ್ಥಗಳ ನಿಮಿತ್ತ ನನಗೆ ಯಾಕೆ ದೂಷಣೆಯಾಗಬೇಕು?

ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.

¶ ದಾಸರೇ, ಈ ಲೋಕದಲ್ಲಿ ನಿಮಗೆ ಯಜಮಾನರಾಗಿರುವವರಿಗೆ ಕ್ರಿಸ್ತನಿಗೆ ವಿಧೇಯರಾಗುವ ಹಾಗೆಯೇ ಮನೋಭೀತಿಯಿಂದ ನಡುಗುವವರಾಗಿಯೂ ಸರಳಹೃದಯರಾಗಿಯೂ ವಿಧೇಯರಾಗಿರಿ.