¶ ಯೇಸು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ಬೆಳೆಯುತ್ತಾ ಬಂದನು; ಇದಲ್ಲದೆ ದೇವರ ಮತ್ತು ಮನುಷ್ಯರ ಕೃಪೆಯು ಆತನ ಮೇಲೆ ಹೆಚ್ಚಾಗುತ್ತಾ ಬಂದಿತು.
TSK
TSK · ಅಪೊಸ್ತಲರ ಕೃತ್ಯಗ 2:47
Treasury of Scripture Knowledge references in ಕನ್ನಡ IRV.
ಆ ವಾಗ್ದಾನವು ನಿಮಗೂ, ನಿಮ್ಮ ಮಕ್ಕಳಿಗೂ, ಅಂತೂ ನಮ್ಮ ದೇವರಾಗಿರುವ ಕರ್ತನು ತನ್ನ ಕಡೆಗೆ ಕರೆಯುವ ದೂರದಲ್ಲಿರುವ ಎಲ್ಲರಿಗೂ ಇರುವುದಾಗಿದೆ” ಎಂದು ಹೇಳಿದನು.
ನಡೆದಿದ್ದ ಸೂಚಕ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಿದ್ದ ಕಾರಣ ಅವರ ದೆಸೆಯಿಂದ ಸಭೆಯವರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟು ಬಿಟ್ಟರು.
ಅವರ ಜೊತೆಯಲ್ಲಿರುವುದಕ್ಕೆ ಉಳಿದವರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ. ಆದರೂ ಜನರು ಅವರನ್ನು ಬಹಳವಾಗಿ ಕೊಂಡಾಡುತ್ತಿದ್ದರು.
¶ ಅಲ್ಲಿದ್ದ ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು, ದೇವರ ವಾಕ್ಯವನ್ನು ಹೊಗಳಿದರು. ಮತ್ತು ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.
ಮತ್ತು ಯಾರನ್ನು ಮೊದಲು ನೇಮಿಸಿದನೋ ಅವರನ್ನು ಕರೆದನು. ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು. ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮಾಪದವಿಗೆ ಸೇರಿಸಿದನು.
ಅದರಂತೆ ಈಗಿನ ಕಾಲದಲ್ಲಿಯೂ ದೇವರ ಕೃಪೆಯಿಂದ ಆರಿಸಿಕೊಂಡವರಾದ ಒಂದು ಭಾಗವು ಉಳಿದಿದ್ದಾರೆ.
¶ ಶಿಲುಬೆಯ ಸಂದೇಶವು ನಾಶನದ ಮಾರ್ಗದಲ್ಲಿರುವವರಿಗೆ ಹುಚ್ಚುತನವಾಗಿದೆ, ಆದರೆ ರಕ್ಷಣೆಯ ಮಾರ್ಗದಲ್ಲಿರುವ ನಮಗೆ ಇದು ದೇವರ ಶಕ್ತಿಯಾಗಿದೆ.