TSK

TSK · ಅಪೊಸ್ತಲರ ಕೃತ್ಯಗ 2:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅದಲ್ಲದೆ ನೀವು ಬಿತ್ತಿದ ಹೊಲದಲ್ಲಿ ಪ್ರಥಮಫಲವು ದೊರೆತಾಗ ಸುಗ್ಗಿಯ ಹಬ್ಬವನ್ನು ಆಚರಿಸಬೇಕು. ಹೊಲ ತೋಟಗಳ ಬೆಳೆಯನ್ನೂ ಕೂಡಿಸುವಾಗ ಅಂದರೆ ವರ್ಷದ ಕೊನೆಯಲ್ಲಿ ಸುಗ್ಗಿ ಹಬ್ಬವನ್ನು ಆಚರಿಸಬೇಕು.

¶ “ಅವರ ಕೃತ್ಯಗಳಿಗೂ, ಆಲೋಚನೆಗಳಿಗೂ ತಕ್ಕದ್ದನ್ನು ಮಾಡುವೆನು; ನಾನು ಇನ್ನು ಮುಂದೆ ಸಮಸ್ತ ಜನಾಂಗಗಳನ್ನೂ ಸಕಲ ಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು; ಅವರು ಬಂದು ನನ್ನ ಮಹಿಮೆಯನ್ನು ನೋಡುವರು.

‹ಇದಲ್ಲದೆ›‹ರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವುದು; ಆಗ ಅಂತ್ಯವು ಬರುವುದು.›

‹ಏಕೆಂದರೆ ಮಿಂಚು ಮಿಂಚುತ್ತಾ ಆಕಾಶದಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಹೇಗೆ ಹೊಳೆಯುವುದೋ ಹಾಗೆಯೇ ಮನುಷ್ಯಕುಮಾರನು ತನ್ನ ದಿನದಲ್ಲಿರುವನು.›

¶ ಇದಲ್ಲದೆ ಆರಾಧನೆ ಮಾಡಬೇಕೆಂದು ಹಬ್ಬಕ್ಕೆ ಬಂದವರಲ್ಲಿ ಕೆಲವು ಮಂದಿ ಗ್ರೀಕರಿದ್ದರು.

¶ ಭಕ್ತರಾದ ಜನರು ಸ್ತೆಫನನ ದೇಹವನ್ನು ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.

ಅವನು ದೈವಭಕ್ತನೂ, ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳುವವನು ಆಗಿದ್ದು, ಜನರಿಗೆ ಬಹಳವಾಗಿ ದಾನಧರ್ಮಮಾಡುತ್ತಾ, ದೇವರಿಗೆ ನಿತ್ಯವೂ ಪ್ರಾರ್ಥನೆಮಾಡುತ್ತಾ ಇದ್ದನು.

ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಭಕ್ತೆಯರಾದ ಕುಲೀನ ಸ್ತ್ರೀಯರನ್ನೂ, ಊರಿನ ಪ್ರಮುಖರನ್ನೂ, ಹುರಿದುಂಬಿಸಿ ಪೌಲ ಮತ್ತು ಬಾರ್ನಬರ ವಿರೋಧವಾಗಿ ಹಿಂಸೆಯನ್ನೆಬ್ಬಿಸಿ ಅವರನ್ನು ತಮ್ಮ ಪ್ರದೇಶದಿಂದ ಆಚೆಗೆ ಅಟ್ಟಿಬಿಟ್ಟರು.

ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.