ಇಸ್ರಾಯೇಲನು ವೃದ್ಧಾಪ್ಯದಿಂದ ಮೊಬ್ಬು ಕಣ್ಣುಳ್ಳವನಾಗಿ ನೋಡಲಾರದೆ ಇದ್ದನು. ಯೋಸೇಫನು ಅವರನ್ನು ಅವನ ಬಳಿಗೆ ಕರೆದುಕೊಂಡು ಬರಲು ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು.
TSK
TSK · ಅಪೊಸ್ತಲರ ಕೃತ್ಯಗ 20:1
Treasury of Scripture Knowledge references in ಕನ್ನಡ IRV.
ಆಮೇಲೆ ಅವರು ಒಂದು ವರ್ಷ ಪೂರ್ತಿಯಾಗಿ ಸಭೆಯವರೊಂದಿಗಿದ್ದುಕೊಂಡು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಪ್ರಥಮಬಾರಿಗೆ ‘ಕ್ರೈಸ್ತರು’ ಎಂಬ ಹೆಸರು ಬಂದದ್ದು.
¶ ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ, ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸಿನಲ್ಲಿ ಯೋಚಿಸಿ; “ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು” ಹೇಳಿದನು.
ಆದರೆ ಪೌಲನು ಇಳಿದು ಹೋಗಿ ಅವನ ಮೇಲೆ ಬಿದ್ದು ತಬ್ಬಿಕೊಂಡು; “ಗೋಳಾಡಬೇಡಿರಿ, ಅವನು ಜೀವಂತವಾಗಿದ್ದಾನೆ” ಎಂದು ಹೇಳಿದನು.
ಆ ದಿನಗಳನ್ನು ಮುಗಿಸಿಕೊಂಡು ನಾವು ಹೊರಡುವಾಗ ಅವರೆಲ್ಲರೂ ತಮ್ಮ ಮಡದಿ ಮಕ್ಕಳು ಸಹಿತವಾಗಿ ಬಂದು ನಮ್ಮನ್ನು ಊರ ಹೊರಕ್ಕೆ ಬೀಳ್ಕೊಟ್ಟರು. ನಾವು ಸಮುದ್ರತೀರದಲ್ಲಿ ಮೊಣಕಾಲೂರಿಕೊಂಡು ಪ್ರಾರ್ಥನೆ ಮಾಡಿ,
ನಾನು ಹಾದುಹೋಗಬೇಕೆಂದಿರುವ ಮಕೆದೋನ್ಯ ಸೀಮೆಯನ್ನು ದಾಟುವಾಗ ನಿಮ್ಮ ಬಳಿಗೆ ಬಂದು ಬಹುಶಃ ನಿಮ್ಮ ಬಳಿಯಲ್ಲೇ ಉಳಿದುಕೊಳ್ಳುವೆನು.
¶ ನಾವು ಮಕೆದೋನ್ಯಕ್ಕೆ ಬಂದ ಮೇಲೂ ನಮ್ಮ ದೇಹಕ್ಕೆ ನೆಮ್ಮದಿ ಇರಲಿಲ್ಲ, ಬದಲಾಗಿ ಎಲ್ಲಾ ವಿಷಯಗಳಲ್ಲಿಯೂ ನಮಗೆ ತೊಂದರೆಗಳಿದ್ದವು. ಹೊರಗೆ ಜಗಳ, ಒಳಗೆ ಭಯ
ಪವಿತ್ರವಾದ ಮುದ್ದಿಟ್ಟು ಸಹೋದರರೆಲ್ಲರನ್ನೂ ವಂದಿಸಿರಿ.