TSK

TSK · ಅಪೊಸ್ತಲರ ಕೃತ್ಯಗ 20:18

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮಲೆನಾಡಿನಲ್ಲಿ ಸಂಚಾರಮಾಡಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡು;

ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.

ಯಾಕೆಂದರೆ ನಾವು ನಿಮ್ಮಲ್ಲಿ ಸಾರಿದ ಸುವಾರ್ತೆಯು ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ ಪವಿತ್ರಾತ್ಮದೊಡನೆಯೂ ಮತ್ತು ಬಹು ನಿಶ್ಚಯದೊಡನೆಯೂ ಬಂತೆಂಬುದನ್ನು ನೀವೂ ಬಲ್ಲಿರಿ. ಯಾಕೆಂದರೆ ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಹೇಗೆ ವರ್ತಿಸಿದ್ದೇವೆಂಬುದನ್ನು ನೀವು ಗಮನಿಸಿದ್ದೀರಿ.

ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂಬುದನ್ನು ನೀವೇ ಬಲ್ಲಿರಿ, ನಾವು ನಿಮ್ಮಲ್ಲಿ ಸೋಮಾರಿಯಾಗಿ ನಡೆಯಲಿಲ್ಲ.