ಚೀಯೋನೇ, ಕಣ್ಣೆತ್ತು, ಉತ್ತರ ದಿಕ್ಕಿನಿಂದ ಬರುವವರನ್ನು ನೋಡು. ನಿನಗೆ ಒಪ್ಪಿಸಿದ ಹಿಂಡು, ನಿನ್ನ ಅಂದವಾದ ಹಿಂಡೂ ಎಲ್ಲಿ?
TSK
TSK · ಅಪೊಸ್ತಲರ ಕೃತ್ಯಗ 20:29
Treasury of Scripture Knowledge references in ಕನ್ನಡ IRV.
“ನರಪುತ್ರನೇ, ಇಸ್ರಾಯೇಲಿನ ಮಂದೆಯ ಕುರುಬರಿಗೆ ಈ ಪ್ರವಾದನೆಯನ್ನು ನುಡಿ, ಪ್ರವಾದಿಸಿ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಯ್ಯೋ, ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳುವ ಇಸ್ರಾಯೇಲಿನ ಕುರುಬರ ಗತಿಯನ್ನು ಏನು ಹೇಳಲಿ! ಕುರಿಗಳನ್ನು ಮೇಯಿಸುವುದು ಕುರುಬರ ಧರ್ಮವಲ್ಲವೋ?
ಮಂದೆಯನ್ನು ಕಾಯದೆ ಬಿಟ್ಟು ಬಿಟ್ಟ ಕುರುಬನ ಗತಿಯನ್ನು ಏನು ಹೇಳಲಿ? ಖಡ್ಗವು ಅವನ ತೋಳಿಗೂ, ಬಲಗಣ್ಣಿಗೂ ತಾಗುವುದು; ಅವನ ತೋಳು ತೀರಾ ಒಣಗಿಹೋಗುವುದು. ಅವನ ಬಲಗಣ್ಣು ಪೂರಾ ಮೊಬ್ಬಾಗುವುದು.”
¶ ‹“ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.›
‹ಕೂಲಿಯಾಳು ಕುರಿಗಳ ಕುರುಬನೂ ಒಡೆಯನೂ ಆಗಿರದೆ, ಅವನು ತೋಳ ಬರುವುದನ್ನು ನೋಡುತ್ತಲೇ ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ. ಆಗ ತೋಳವು ಕುರಿಗಳನ್ನು ಹಿಡಿದುಕೊಂಡು ಮಂದೆಯನ್ನು ಚದರಿಸುತ್ತದೆ.›
¶ ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.