TSK

TSK · ಅಪೊಸ್ತಲರ ಕೃತ್ಯಗ 21:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಸಮುವೇಲನು ಮುಚ್ಚುಮರೆಯಿಲ್ಲದೆ ಎಲ್ಲವನ್ನು ತಿಳಿಸಿದನು. ಏಲಿಯು ಅದನ್ನು ಕೇಳಿ, “ಆತನು ಯೆಹೋವನು; ತನಗೆ ಸರಿಕಾಣುವುದನ್ನು ಮಾಡಲಿ” ಎಂದನು.

¶ ಹಿಜ್ಕೀಯನು ಯೆಶಾಯನಿಗೆ, “ನೀನು ತಿಳಿಸಿದ ಯೆಹೋವನ ಮಾತು ಒಳ್ಳೆಯದಾಗಿದೆ. ನನ್ನ ಜೀವಮಾನ ಕಾಲದಲ್ಲಿ ಸಮಾಧಾನವೂ, ಭದ್ರತೆಯೂ ಇರುವುದಲ್ಲವೇ?” ಎಂದು ಕೊಂಡನು.

ಆತನು ಸ್ವಲ್ಪ ಮುಂದೆ ಹೋಗಿ ಬೋರಲು ಬಿದ್ದು, ‹“ನನ್ನ ತಂದೆಯೇ, ಸಾಧ್ಯವಾದರೆ ಈ›‹ಪಾನಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಆದರೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ”› ಎಂದು ದೇವರನ್ನು ಪ್ರಾರ್ಥಿಸಿದನು.

ಅದಕ್ಕಾತನು, ‹“ನೀವು ಪ್ರಾರ್ಥಿಸುವಾಗ ಈ ರೀತಿಯಾಗಿ ಪ್ರಾರ್ಥಿಸಿರಿ,› ‹“ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ.› ‹ನಿನ್ನ ರಾಜ್ಯವು ಬರಲಿ.›