TSK

TSK · ಅಪೊಸ್ತಲರ ಕೃತ್ಯಗ 21:33

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅದಕ್ಕೆ ಅವರು, “ನಾವು ಸತ್ಯವಾಗಿ ನಿನ್ನನ್ನು ಕೊಲ್ಲುವುದಿಲ್ಲ; ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸುತ್ತೇವೆ” ಎಂದು ಹೇಳಿ ಅವನನ್ನು ಎರಡು ಹೊಸ ಹಗ್ಗಗಳಿಂದ ಕಟ್ಟಿ ಗುಡ್ಡದ ಮೇಲಿನಿಂದ ಕರತಂದರು.

ಅವಳು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿರಿಸಿ, ಹೊಸ ಹಗ್ಗಗಳನ್ನು ತೆಗೆದುಕೊಂಡು ಅವುಗಳಿಂದ ಅವನನ್ನು ಕಟ್ಟಿ, “ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಲು ಅವನೆದ್ದು ತೋಳುಗಳಿಗೆ ಕಟ್ಟಿದ್ದ ಹಗ್ಗಗಳನ್ನು ದಾರವನ್ನೋ ಎಂಬಂತೆ ಹರಿದುಬಿಟ್ಟನು.

ಹೀಗಿರಲಾಗಿ ಪಿಲಾತನು ಹೊರಗೆ ಅವರ ಬಳಿಗೆ ಬಂದು, “ಈ ಮನುಷ್ಯನ ಮೇಲೆ ಏನು ದೂರು ತಂದಿದ್ದೀರಿ?” ಎಂದು ಕೇಳಿದನು.

ನಿನಗೆ ಬೇಡಿಗಳೂ, ಹಿಂಸೆಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಎಲ್ಲಾ ಪಟ್ಟಣಗಳಲ್ಲಿಯೂ ನನಗೆ ಎಚ್ಚರಿಕೆ ನೀಡಿದ್ದಾನೆ ಎಂಬುದನ್ನು ಬಲ್ಲೆನು.

ಯಾವ ಕಾರಣದಿಂದ ಹೀಗೆ ಅವನಿಗೆ ವಿರುದ್ಧವಾಗಿ ಕೂಗಾಡುತ್ತಾರೆಂಬುದನ್ನು ಸಹಸ್ರಾಧಿಪತಿಯು ತಿಳಿದುಕೊಳ್ಳುವುದಕ್ಕಾಗಿ ಅವನನ್ನು ಕೋಟೆಯೊಳಗೆ ತಂದು, ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಆಜ್ಞಾಪಿಸಿದನು.

¶ “ನಾನು ಅವರಿಗೆ; ಪ್ರತಿವಾದಿಯು ವಾದಿಗಳಿಗೆ, ಮುಖಾಮುಖಿಯಾಗಿ ನಿಂತು ತನ್ನ ಮೇಲೆ ಆರೋಪಿಸಿದ ದೋಷದ ವಿಷಯದಲ್ಲಿ ಪ್ರತಿವಾದಮಾಡುವುದಕ್ಕೆ ಎಡೆಕೊಡದೆ, ಅವನನ್ನು ಒಪ್ಪಿಸಿಬಿಡುವುದು ರೋಮಾಯರ ಪದ್ಧತಿಯಲ್ಲವೆಂದು” ಹೇಳಿದೆನು.

ಈ ಕಾರಣದಿಂದ ನಾನು ನಿಮ್ಮನ್ನು ಕಂಡು ಮಾತನಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲ್ ಜನರ ನಿರೀಕ್ಷೆಯ ನಿಮಿತ್ತವಾಗಿ ಈ ಬೇಡಿಯಿಂದ ಬಂಧಿತನಾಗಿದ್ದೇನೆ” ಎಂದು ಹೇಳಿದನು.

ಒನೇಸಿಪೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ, ಅವನು ಹಲವುಬಾರಿ ನನ್ನನ್ನು ಉಪಚರಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡದೆ,