TSK

TSK · ಅಪೊಸ್ತಲರ ಕೃತ್ಯಗ 21:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಫಿಲಿಪ್ಪನು ಸಮಾರ್ಯವೆಂಬ ಪಟ್ಟಣಕ್ಕೆ ಹೋಗಿ ಕ್ರಿಸ್ತನ ವಿಷಯವಾಗಿ ಅಲ್ಲಿರುವವರಿಗೆ ಪ್ರಚುರಪಡಿಸಿದನು.

ಇದು ಸಹೋದರರಿಗೆ ತಿಳಿದು ಬರಲು, ಅವರು ಅವನನ್ನು ಕೈಸರೈಯಕ್ಕೆ ಕರೆದುಕೊಂಡು ಹೋಗಿ, ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು.

ಅವನಿಗೆ ಆ ದರ್ಶನವಾದ ಮೇಲೆ, ಆ ಸೀಮೆಯವರಿಗೆ ಸುವಾರ್ತೆಯನ್ನು ಸಾರುವುದಕ್ಕೆ ದೇವರು ನಮ್ಮನ್ನು ಕರೆದಿದ್ದಾನೆಂದು ನಾವು ನಿಶ್ಚಯಿಸಿಕೊಂಡು, ಕೂಡಲೆ ಮಕೆದೋನ್ಯಕ್ಕೆ ಹೊರಟುಹೋಗುವ ಪ್ರಯತ್ನಮಾಡಿದೆವು.

¶ ಬಳಿಕ ಪ್ರಾರ್ಥನೆ ನಡೆಯುವ ಆ ಸ್ಥಳಕ್ಕೆ ನಾವು ಹೋಗುತ್ತಿರುವಾಗ ಗಾರುಡಗಾತಿಯಾದ ಒಬ್ಬ ದಾಸಿಯು ನಮ್ಮೆದುರಿಗೆ ಬಂದಳು. ಅವಳು ಕಣಿ ಹೇಳುವುದರಿಂದ ಅವಳ ಯಜಮಾನರಿಗೆ ಬಹು ಆದಾಯವಾಗುತ್ತಿತ್ತು.

ಹುಳಿಯಿಲ್ಲದ ರೊಟ್ಟಿಯ ಹಬ್ಬದ ದಿನಗಳನ್ನು ಪೂರೈಸಿದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿನಗಳಲ್ಲಿ‍ ತ್ರೋವದಲ್ಲಿ ಬಂದು ಅವರನ್ನು ಸೇರಿದೆವು. ಅಲ್ಲಿ ಏಳು ದಿನಗಳ ಕಾಲ ತಂಗಿದ್ದೆವು.

¶ ಆ ಮೇಲೆ ಅವನು ಶತಾಧಿಪತಿಗಳಲ್ಲಿ ಇಬ್ಬರನ್ನು ಕರೆಯಿಸಿ; “ರಾತ್ರಿ ಒಂಭತ್ತು ಘಂಟೆಗೆ ಕೈಸರೈಯದ ತನಕ ಹೋಗುವಂತೆ ಇನ್ನೂರು ಮಂದಿ ಸಿಪಾಯಿಗಳನ್ನೂ, ಎಪ್ಪತ್ತುಮಂದಿ ಕುದುರೆ ಸವಾರರನ್ನೂ, ಇನ್ನೂರು ಮಂದಿ ಈಟಿ ಹಿಡಿದ ಸೈನಿಕರನ್ನು ಸಿದ್ಧಮಾಡಿರಿ.”

¶ ಮೂರು ತಿಂಗಳಾದ ಮೇಲೆ ಅಲೆಕ್ಸಾಂದ್ರಿಯದಿಂದ ಬಂದು, ಆ ದ್ವೀಪದಲ್ಲಿ ಹಿಮಕಾಲವನ್ನು ಕಳೆಯಲು ತಂಗಿದ್ದ ಒಂದು ಹಡಗನ್ನು ಹತ್ತಿ ಹೊರಟೆವು. ಆ ಹಡಗಿಗೆ ಅಶ್ವಿನೀದೇವತೆಗಳೆಂಬ ಚಿಹ್ನೆ ಇತ್ತು.

ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ ನೇಮಿಸಿದನು.