TSK

TSK · ಅಪೊಸ್ತಲರ ಕೃತ್ಯಗ 22:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

‹ಆದುದರಿಂದ ಏನು ಉತ್ತರ ಕೊಡಬೇಕೆಂಬ ವಿಷಯದಲ್ಲಿ ನೀವು ಮುಂದಾಗಿ ಯೋಚಿಸುವುದಿಲ್ಲವೆಂದು ನಿಮ್ಮ ಮನಸ್ಸಿನಲ್ಲಿ ನಿಶ್ಚಯಮಾಡಿಕೊಳ್ಳಿರಿ.›

¶ “ಸಹೋದರರೇ, ಅಬ್ರಹಾಮನ ವಂಶಸ್ಥರೇ, ಮತ್ತು ನಿಮ್ಮೊಂದಿಗಿರುವ ಯೆಹೂದ್ಯಮತಾವಲಂಬಿಗಳೇ, ನಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಲ್ಪಟ್ಟಿದೆ.

¶ ಆಗ ಪೌಲನು ಹಿರೀಸಭೆಯನ್ನು ದೃಷ್ಟಿಸಿ ನೋಡಿ; “ಸಹೋದರರೇ, ನಾನು ಈ ದಿನದವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ” ಅಂದನು.

¶ ದೇಶಾಧಿಪತಿಯು ಪೌಲನಿಗೆ; ನೀನು ಮಾತನಾಡಬಹುದೆಂದು ಸನ್ನೆಮಾಡಲು, ಅವನು ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ; “ನೀನು ಅನೇಕ ವರ್ಷಗಳಿಂದ ಈ ದೇಶದ ಜನರಿಗೆ ನ್ಯಾಯಾಧಿಪತಿಯಾಗಿರುತ್ತೀ, ಎಂದು ತಿಳಿದು ನಾನು ಧೈರ್ಯವಾಗಿ ಪ್ರತಿವಾದ ಮಾಡುತ್ತಿದ್ದೇನೆ.

¶ “ನಾನು ಅವರಿಗೆ; ಪ್ರತಿವಾದಿಯು ವಾದಿಗಳಿಗೆ, ಮುಖಾಮುಖಿಯಾಗಿ ನಿಂತು ತನ್ನ ಮೇಲೆ ಆರೋಪಿಸಿದ ದೋಷದ ವಿಷಯದಲ್ಲಿ ಪ್ರತಿವಾದಮಾಡುವುದಕ್ಕೆ ಎಡೆಕೊಡದೆ, ಅವನನ್ನು ಒಪ್ಪಿಸಿಬಿಡುವುದು ರೋಮಾಯರ ಪದ್ಧತಿಯಲ್ಲವೆಂದು” ಹೇಳಿದೆನು.

¶ ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ, ಫೆಸ್ತನು ಮಹಾಶಬ್ದದಿಂದ; “ಪೌಲನೇ, ನಿನಗೆ ಹುಚ್ಚು ಹಿಡಿದಿದೆ; ಅಧಿಕ ಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿಸಿದೆ,” ಎಂದು ಹೇಳಿದನು.

ಇದರಿಂದ ಅವರು ಧರ್ಮಶಾಸ್ತ್ರದ ಮುಖ್ಯ ತಾತ್ಪರ್ಯ ತಮ್ಮ ಹೃದಯದಲ್ಲಿ ಬರೆದಿದೆ ಎಂಬುದನ್ನು ತೋರ್ಪಡಿಸುತ್ತಾರೆ. ಇದಕ್ಕೆ ಅವರ ಮನಸ್ಸು ಸಹ ಸಾಕ್ಷಿ ನುಡಿಯುತ್ತದೆ; ಅವರ ಆಲೋಚನೆಗಳು ವಾದಿಪ್ರತಿವಾದಿಗಳಂತೆ, ಇದು ತಪ್ಪೆಂದು ಅದು ತಪ್ಪಲ್ಲವೆಂದು ಹೇಳುತ್ತದೆ.

ನೀವು ದೇವರ ಚಿತ್ತಾನುಸಾರವಾಗಿ ಪಟ್ಟ ದುಃಖವು ನಿಮ್ಮಲ್ಲಿ ಎಂಥ ಶ್ರದ್ದೆಯನ್ನು ಉಂಟುಮಾಡಿತು ನೋಡಿರಿ. ನೀವು ನಿರ್ದೋಷಿಗಳೆಂದು ಸಾಬೀತುಪಡಿಸುವುದಕ್ಕೆ ಎಂಥ ಪ್ರಯಾಸ, ಎಂಥ ರೋಷ; ಎಂಥ ಭಯ; ಎಂಥ ಹಂಬಲ; ಎಂಥ ಉತ್ಸಾಹ; ತಪ್ಪಿತಸ್ಥರನ್ನು ಶಿಕ್ಷಿಸಲು ಎಂಥ ಬಯಕೆ. ನೀವು ಆ ಕಾರ್ಯದಲ್ಲಿ ನಿರ್ದೋಷಿಗಳೆಂದು ಎಲ್ಲಾ ವಿಧದಲ್ಲಿಯೂ ತೋರಿಸಿದ್ದೀರಿ.

ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಬಂಧನದಲ್ಲಿರುವಾಗಲೂ, ಸುವಾರ್ತೆಯ ಕುರಿತಾದ ವಾದ-ಪ್ರತಿವಾದಗಳಲ್ಲಿಯು ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿರಿಸಿಕೊಂಡಿದ್ದೇನೆ.

ನಾನು ಮೊದಲನೆ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನ ಸಂಗಡ ಇರಲಿಲ್ಲ, ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರಿಗೆ ದೋಷವಾಗಿ ಎಣಿಸಲ್ಪಡದೆ ಇರಲಿ.