TSK

TSK · ಅಪೊಸ್ತಲರ ಕೃತ್ಯಗ 22:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅದಕ್ಕೆ ಮೋಶೆಯು ದೇವರಿಗೆ, “ನಾನು ಇಸ್ರಾಯೇಲರ ಬಳಿಗೆ ಹೋಗಿ, ‘ನಿಮ್ಮ ಪೂರ್ವಿಕರ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ’ ಎಂದು ಹೇಳಿದಾಗ, ನನಗೆ ಒಂದು ವೇಳೆ ಅವರು, ಆತನ ಹೆಸರು ಏನು? ಎಂದು ಕೇಳಿದರೆ ನಾನೇನು ಉತ್ತರಕೊಡಬೇಕು” ಎಂದನು.

ತನ್ನ ಪೂರ್ವಿಕರ ದೇವರಾದ ಯೆಹೋವನನ್ನೂ ಆರಾಧಿಸದೆ, ಆತನಿಗೆ ಮೆಚ್ಚಿಗೆಯಾಗುವಂತೆ ನಡೆಯುವ ಮಾರ್ಗವನ್ನೂ ಬಿಟ್ಟುಬಿಟ್ಟನು.

ನಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರೇ, ಯೆಹೋವನೇ, ನಿನ್ನ ಪ್ರಜೆಗಳಲ್ಲಿ ಇಂಥಾ ಮನಸ್ಸು ಯಾವಾಗಲೂ ಇರುವಂತೆ ಮಾಡು. ನಿನ್ನಲ್ಲಿ ಭಯಭಕ್ತಿ ಉಳ್ಳವರಾಗಿರುವುದಕ್ಕೆ ಅವರಿಗೆ ಸ್ಥಿರಚಿತ್ತವನ್ನು ಅನುಗ್ರಹಿಸು.

ದೇವಾಲಯಕ್ಕೆ ಯಾತ್ರಿಕರಾಗಿ ಬಂದಿರುವವರಲ್ಲಿ ಇರಬೇಕಾದ ಪರಿಶುದ್ಧತ್ವವು ಅನೇಕರಲ್ಲಿ ಇಲ್ಲದಿದ್ದರೂ ಪೂರ್ವಿಕರ ದೇವರಾದ ಯೆಹೋವನನ್ನು ಹುಡುಕಬೇಕೆಂದು ಮನಸ್ಸುಮಾಡಿರುವವರಿಗೆಲ್ಲರಿಗೂ ಕ್ಷಮೆಯನ್ನು ಅನುಗ್ರಹಿಸು ಎಂದು ವಿಜ್ಞಾಪನೆ ಮಾಡಿದನು.

“ನಾನು ನಿನ್ನನ್ನು ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆ ತಿಳಿದಿದ್ದೆನು; ನೀನು ಉದರದಿಂದ ಬರುವುದಕ್ಕೆ ಮೊದಲೇ ನಿನ್ನನ್ನು ಪ್ರತಿಷ್ಠಿಸಿದ್ದೆನು. ಜನಾಂಗಗಳಿಗೆ ಪ್ರವಾದಿಯನ್ನಾಗಿ ನಿನ್ನನ್ನು ನೇಮಿಸಿದ್ದೇನೆ” ಎಂಬ ವಾಕ್ಯವನ್ನು ದಯಪಾಲಿಸಿದನು.

‹ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.›

ನೀವು ಮರದ ಕಂಬಕ್ಕೆ ತೂಗಹಾಕಿ ಕೊಂದ ಯೇಸುವನ್ನು ನಮ್ಮ ಪೂರ್ವಿಕರ ದೇವರು ಎಬ್ಬಿಸಿದನು.

ಕರ್ತನು ಅವನಿಗೆ, ‹“ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ, ಅರಸುಗಳಿಗೂ, ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.›

“ಇಸ್ರಾಯೇಲ್ ಜನರೇ, ಮತ್ತು ಯೆಹೂದ್ಯ ಮತಾವಲಂಬಿಗಳೇ, ಕೇಳಿರಿ. ನಮ್ಮ ಇಸ್ರಾಯೇಲ್ ಜನರ ದೇವರು ಆರಿಸಿಕೊಂಡ ನಮ್ಮ ಪೂರ್ವಿಕರು ಐಗುಪ್ತದೇಶದಲ್ಲಿ ವಾಸಿಸುತ್ತಿದ್ದಾಗ ಅವರನ್ನು ಪ್ರಬಲರನ್ನಾಗಿ ಮಾಡಿ, ಅಭಿವೃದ್ಧಿಗೆ ತಂದು ತನ್ನ ಭುಜಬಲದಿಂದ ಅವರನ್ನು ಆ ದೇಶದಿಂದ ಬರಮಾಡಿದನು.

ಒಂದನ್ನು ಮಾತ್ರ ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ, ಅದೇನೆಂದರೆ; ಇವರು ನನ್ನನ್ನು ಧರ್ಮವಿರೋಧಿ ಎಂದೂ ಹೇಳುವ, ಮಾರ್ಗಕ್ಕನುಸಾರವಾಗಿ ನಾನು ನಮ್ಮ ಪೂರ್ವಿಕರ ದೇವರನ್ನು ಆರಾಧಿಸುವವನಾಗಿದ್ದೇನೆ. ಧರ್ಮಶಾಸ್ತ್ರಕ್ಕನುಗುಣವಾಗಿರುವ ಮತ್ತು ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವ ಎಲ್ಲಾ ವಿಷಯಗಳನ್ನು ನಂಬುತ್ತೇನೆ.

¶ ಯೇಸು ಕ್ರಿಸ್ತನ ದಾಸನೂ, ಅಪೊಸ್ತಲನಾಗುವುದಕ್ಕೆ ಕರೆಯಲ್ಪಟ್ಟವನೂ, ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಿಸಲ್ಪಟ್ಟವನೂ ಆಗಿರುವ ಪೌಲನು,

¶ ನಾನು ನಿಮಗೆ ತಿಳಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನೆಂದರೆ, ಕರ್ತನಾದ ಯೇಸು ತಾನು ಹಿಡಿದು ಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು,

ನಾನು ಅದನ್ನು ಮನುಷ್ಯನಿಂದ ಹೊಂದಲಿಲ್ಲ, ನನಗೆ ಯಾರೂ ಉಪದೇಶಿಸಲಿಲ್ಲ, ಬದಲಾಗಿ ಯೇಸು ಕ್ರಿಸ್ತನೇ ಅದನ್ನು ನನಗೆ ಪ್ರಕಟಪಡಿಸಿದನು.

¶ ಕ್ರಿಸ್ತಯೇಸುವಿನಲ್ಲಿರುವ ಜೀವ ವಾಗ್ದಾನವನ್ನು ತಿಳಿಯಪಡಿಸುವುದಕ್ಕೋಸ್ಕರ ದೇವರ ಚಿತ್ತಾನುಸಾರವಾಗಿ ಕ್ರಿಸ್ತಯೇಸುವಿನ ಅಪೊಸ್ತಲನಾದ ಪೌಲನು,

ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.