“ದೇವಾಧಿದೇವನಾದ ಯೆಹೋವನು ಇದಕ್ಕೆ ಸಾಕ್ಷಿ; ಆ ದೇವಾಧಿದೇವನಾದ ಯೆಹೋವನಿಗೆ ಇದು ಗೊತ್ತಿದೆ. ಇಸ್ರಾಯೇಲರಿಗೂ ಗೊತ್ತಾಗುವುದು. ನಾವು ದ್ರೋಹಿಗಳು, ಯೆಹೋವನ ವಿರುದ್ಧವಾಗಿ ಪಾಪಮಾಡಿದವರು ಆಗಿದ್ದರೆ ಯೆಹೋವನು ನಮ್ಮನ್ನು ಈ ಹೊತ್ತೇ ನಮ್ಮ ಜೀವವನ್ನು ತೆಗೆದುಬಿಡಲಿ.
TSK
TSK · ಅಪೊಸ್ತಲರ ಕೃತ್ಯಗ 25:11
Treasury of Scripture Knowledge references in ಕನ್ನಡ IRV.
¶ ದಾವೀದನು ತನ್ನ ಮನಸ್ಸಿನಲ್ಲಿ, “ನಾನು ಇಲ್ಲೇ ಇದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಸಾಯಲೇಬೇಕು ಆದ್ದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆ ಮೇಲೆ ಸೌಲನು ಇಸ್ರಾಯೇಲ್ಯರ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕದೆ ಬಿಟ್ಟುಬಿಡುವನು. ನಾನು ಅವನ ಕೈಗೆ ತಪ್ಪಿಸಿಕೊಂಡವನಾಗಿರುವೆನು” ಅಂದುಕೊಂಡನು.
ನನ್ನ ಭೂಮಿಯು ನನ್ನ ಮೇಲೆ ಕೂಗಿಕೊಂಡರೆ ಅದರ ನೇಗಿಲ ಗೆರೆಗಳೆಲ್ಲಾ ಅತ್ತರೆ,
ಅದಕ್ಕೆ ಪೌಲನು; “ಅವರು ವಿಚಾರಣೆಮಾಡದೆ ರೋಮಾಪುರದ ಹಕ್ಕುದಾರರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರದುಕೊಂಡುಹೋದರೆ ಸರಿ” ಎಂದು ಹೇಳಿದನು.
ಅವರು ಪೌಲನನ್ನು ಬಾರುಗಳಿಂದ ಕಟ್ಟುವಾಗ ಅವನು ತನ್ನ ಹತ್ತಿರ ನಿಂತಿದ್ದ ಶತಾಧಿಪತಿಯನ್ನು; “ರೋಮಾಪುರದ ಹಕ್ಕುದಾರನಾದ ಮನುಷ್ಯನನ್ನು ನ್ಯಾಯವಿಚಾರಣೆಮಾಡದೆ, ಕೊರಡೆಗಳಿಂದ ಹೊಡಿಸುವುದು ನಿಮಗೆ ನ್ಯಾಯವೋ?” ಎಂದು ಕೇಳಿದನು.
ಅದಕ್ಕೆ ಪೌಲನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುವ ತನಕ, ತನ್ನನ್ನು ಕಾಯಬೇಕೆಂದು ಕೇಳಿಕೊಂಡಾಗ ನಾನು ಕೈಸರನ ಬಳಿಗೆ ಕಳುಹಿಸುವ ತನಕ, ಅವನನ್ನು ಕಾಯುವುದಕ್ಕೆ ಅಪ್ಪಣೆಕೊಟ್ಟೆನು ಎಂದು ಹೇಳಿದನು.
ಅಗ್ರಿಪ್ಪನು ಫೆಸ್ತನಿಗೆ; “ಈ ಮನುಷ್ಯನು ಕೈಸರನಿಗೆ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡುಗಡೆ ಮಾಡಬಹುದಿತ್ತು” ಎಂದು ಹೇಳಿದನು.
ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ಪ್ರವಾದಿಗಳನ್ನೂ ಕೊಂದರು ಹಾಗು ನಮ್ಮನ್ನೂ ಅಟ್ಟಿಬಿಟ್ಟರು. ಅವರು ದೇವರನ್ನು ಮೆಚ್ಚಿಸುವವರಲ್ಲ ಮತ್ತು ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.