TSK

TSK · ಅಪೊಸ್ತಲರ ಕೃತ್ಯಗ 26:29

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅದಕ್ಕೆ ಮೋಶೆ, “ನನ್ನ ನಿಮಿತ್ತವಾಗಿ ನೀನು ಹೊಟ್ಟೆಕಿಚ್ಚುಪಡುತ್ತೀಯೋ? ಯೆಹೋವನ ಅನುಗ್ರಹದಿಂದ ಆತನ ಜನರೆಲ್ಲರೂ ಆತ್ಮವನ್ನು ಹೊಂದಿದವರೂ, ಪ್ರವಾದಿಸುವವರೂ ಆದರೆ ಎಷ್ಟೋ ಒಳ್ಳೆಯದು” ಎಂದನು.

¶ ಆಕೆಯು ಒಂದು ದಿನ ತನ್ನ ಯಜಮಾನಿಯ ಬಳಿ, “ನಮ್ಮ ದಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಹತ್ತಿರ ಇದ್ದಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ಅವನು ನನ್ನ ಯಜಮಾನನನ್ನು ಕುಷ್ಠರೋಗದಿಂದ ವಾಸಿಮಾಡುತ್ತಿದ್ದನು” ಎಂದು ಹೇಳಿದಳು.

¶ ತರುವಾಯ ಆತನು ಯೆರೂಸಲೇಮ್ ಪಟ್ಟಣದ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಕಣ್ಣೀರಿಡುತ್ತಾ,

¶ ಹೆರೋದನು ಅವನನ್ನು ಜನರ ಮುಂದೆ ತರಿಸಬೇಕೆಂದಿದ್ದ ದಿನದ ಹಿಂದಿನ ರಾತ್ರಿಯಲ್ಲಿ, ಪೇತ್ರನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟವನಾಗಿ, ಇಬ್ಬರು ಸಿಪಾಯಿಗಳ ನಡುವೆ ನಿದ್ದೆಮಾಡುತ್ತಿದ್ದನು. ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯುತ್ತಿದ್ದರು.

ಅವರು ಅನೇಕ ದಿನಗಳು ಅಲ್ಲಿ ತಂಗಿರಲಾಗಿ ಫೆಸ್ತನು ಪೌಲನ ಸಂಗತಿಯನ್ನು ರಾಜನಿಗೆ ತಿಳಿಸಿ ಹೇಳಿದ್ದೇನಂದರೆ; “ಫೇಲಿಕ್ಸನು ಬಿಟ್ಟುಹೋದ ಒಬ್ಬ ಸೆರೆಯವನು ಇದ್ದಾನೆ.

¶ ಸಹೋದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬುದೇ ನನ್ನ ಮನೋಭಿಲಾಷೆಯೂ ಮತ್ತು ದೇವರಿಗೆ ನಾನು ಮಾಡುವ ವಿಜ್ಞಾಪನೆಯೂ ಆಗಿದೆ.

ನಾನಿರುವಂತೆಯೇ ಎಲ್ಲಾ ಮನುಷ್ಯರು ಇರಬೇಕೆಂಬುದು ನನ್ನ ಇಷ್ಟ ಆದರೆ ಒಬ್ಬನು ಒಂದು ವಿಧವಾಗಿ ಮತ್ತೊಬ್ಬನು ಇನ್ನೊಂದು ವಿಧವಾಗಿ ದೇವರಿಂದ ವರವನ್ನು ಹೊಂದಿಕೊಂಡಿದ್ದಾರೆ.

ಆ ಸುವಾರ್ತೆಯ ನಿಮಿತ್ತವಾಗಿ ರಾಯಭಾರಿಯಾದ ನಾನು ಸೆರೆಮನೆಯಲ್ಲಿ ಬಿದ್ದಿದ್ದೇನಲ್ಲಾ. ಅದರ ವಿಷಯದಲ್ಲಿ ನಾನು ಮಾತನಾಡಬೇಕಾದ ಹಾಗೆಯೇ ಧೈರ್ಯವಾಗಿ ನಾನು ಮಾತನಾಡುವಂತೆ ನನಗಾಗಿ ಬೇಡಿಕೊಳ್ಳಿರಿ.