¶ ಅವರು ಆ ದೇವಾಲಯದ ಪ್ರತಿಷ್ಠೆಗೋಸ್ಕರ ನೂರು ಹೋರಿ, ಇನ್ನೂರು ಟಗರು, ನಾನೂರು ಕುರಿಮರಿ ಇವುಗಳನ್ನೂ, ಇಸ್ರಾಯೇಲರ ದೋಷಪರಿಹಾರಾರ್ಥವಾಗಿ ಅವರ ಕುಲಗಳ ಸಂಖ್ಯಾನುಸಾರ ಹನ್ನೆರಡು ಹೋತಗಳನ್ನೂ ಸಮರ್ಪಿಸಿದರು.
TSK
TSK · ಅಪೊಸ್ತಲರ ಕೃತ್ಯಗ 26:7
Treasury of Scripture Knowledge references in ಕನ್ನಡ IRV.
ರಾತ್ರಿಯಲ್ಲಿ ಯೆಹೋವನ ಮಂದಿರದಲ್ಲಿರುವ ಆತನ ಸರ್ವಸೇವಕರೇ, ಬನ್ನಿರಿ, ಯೆಹೋವನನ್ನು ಕೊಂಡಾಡಿರಿ.
ಯೇಸು ಅವರಿಗೆ, ‹“ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವಾಗ, ನನ್ನನ್ನು ಹಿಂಬಾಲಿಸಿದವರಾದ›‹ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.›
¶ ಇದಲ್ಲದೆ ಅಸೇರನ ಕುಲದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿ ಇದ್ದಳು. ಆಕೆ ಬಹಳ ಮುಪ್ಪಿನವಳು. ಮದುವೆಯಾಗಿ ಏಳು ವರ್ಷ ಗಂಡನ ಕೂಡ ಸಂಸಾರ ಮಾಡಿ ವಿಧವೆಯಾಗಿದ್ದಳು,
‹ನನ್ನ ರಾಜ್ಯದಲ್ಲಿ ನೀವು ನನ್ನ ಮೇಜಿನ ಮೇಲೆ ಊಟಮಾಡುವಿರಿ, ಕುಡಿಯುವಿರಿ ಮತ್ತು ಸಿಂಹಾಸನಗಳ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರ್ಪುಮಾಡುವಿರಿ.›
¶ “ಅಗ್ರಿಪ್ಪರಾಜನೇ, ಯೆಹೂದ್ಯರು ನನ್ನ ಮೇಲೆ ಆರೋಪಿಸುವ ಎಲ್ಲಾ ಆರೋಪಗಳ ವಿಷಯವಾಗಿ ನಿನ್ನ ಎದುರಿನಲ್ಲಿ ನಾನು ಈಹೊತ್ತು ಪ್ರತಿವಾದ ಮಾಡಬೇಕಾಗಿರುವುದರಿಂದ, ನನ್ನನ್ನು ಧನ್ಯನೆಂದು ಎಣಿಸಿಕೊಳ್ಳುತ್ತೇನೆ.
ನಿಮ್ಮ ಮುಖವನ್ನು ನೋಡುವುದಕ್ಕೂ ನಿಮ್ಮ ನಂಬಿಕೆಯ ಕೊರತೆಗಳನ್ನು ನೀಗುವುದಕ್ಕೂ ನಾವು ಹಗಲಿರುಳು ದೇವರನ್ನು ತುಂಬಾ ಕಳಕಳಿಯಿಂದ ಬೇಡುವವರಾಗಿದ್ದೇವೆ.
¶ ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬನು ಅನ್ಯದೇಶಗಳಲ್ಲಿ ಚದುರಿರುವ ಇಸ್ರಾಯೇಲ್ಯರ ಹನ್ನೆರಡು ಗೋತ್ರದವರಿಗೂ ಬರೆಯುವುದೇನೆಂದರೆ, “ನಿಮಗೆ ಶುಭವಾಗಲಿ.”