TSK

TSK · ಅಪೊಸ್ತಲರ ಕೃತ್ಯಗ 27:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಫರೋಹನ ಸೇವಕರಲ್ಲಿ ಯಾರಾರು ಯೆಹೋವನ ಮಾತಿಗೆ ಹೆದರಿದರೋ ಅವರು ತಮ್ಮ ಆಳುಗಳನ್ನೂ ಪಶುಗಳನ್ನೂ ಬೇಗ ಮನೆಗೆ ಬರಮಾಡಿಕೊಂಡರು.

ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು, ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.

ಕೊಂಬಿನ ಧ್ವನಿಯನ್ನು ಕೇಳಿದ ಯಾರೇ ಆಗಲಿ ಎಚ್ಚರಗೊಳ್ಳದೆ, ಖಡ್ಗಕ್ಕೆ ಸಿಕ್ಕಿ ನಾಶವಾದರೆ, ತನ್ನ ಮರಣಕ್ಕೆ ತಾನೇ ಹೊಣೆಯಾಗುವನು.

¶ ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ದೈವೋಕ್ತಿಯನ್ನು ಹೊಂದಿ, ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ನಂಬಿಕೆಯಿಂದಲೇ ಅವನು ಲೋಕದವರು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡನು. ಆದುದ್ದರಿಂದ ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.