¶ ತರುವಾಯ ಯೆಹೋವನು ಮೋಶೆಗೆ, “ಆಕಾಶಕ್ಕೆ ನಿನ್ನ ಕೈಯನ್ನು ಚಾಚು. ಆಗ ಐಗುಪ್ತ ದೇಶದಲ್ಲೆಲ್ಲಾ ಕತ್ತಲು ಉಂಟಾಗುವುದು. ಆ ಕತ್ತಲೆಯಿಂದಾಗಿ ಜನರು ತಡವರಿಸುತ್ತಾ ನಡೆಯುವರು” ಎಂದು ಹೇಳಿದನು.
TSK
TSK · ಅಪೊಸ್ತಲರ ಕೃತ್ಯಗ 27:20
Treasury of Scripture Knowledge references in ಕನ್ನಡ IRV.
ಆತನು ಅಪ್ಪಣೆಕೊಡಲು ಬಿರುಗಾಳಿಯುಂಟಾಗಿ, ಅದರಲ್ಲಿ ತೆರೆಗಳನ್ನು ಎಬ್ಬಿಸಿತು.
“ನಿನ್ನ ಕಾಲು ಸವೆಯದಂತೆಯೂ ನಿನ್ನ ಗಂಟಲು ಆರದಂತೆಯೂ ತಡೆದುಕೋ” ಎಂದೆನು, ಆದರೆ ನೀನು, “ನಿರೀಕ್ಷೆಯಿಲ್ಲ, ಆಗಲಾರದು, ಅನ್ಯರ ಮೇಲೆ ಮೋಹಗೊಂಡಿದ್ದೇನೆ. ಅವರ ಹಿಂದೆಯೇ ಹೋಗುವೆನು” ಅಂದುಕೊಂಡಿದ್ದಿ.
¶ ಆಗ ಯೆಹೋವನು ದೊಡ್ಡ ಬಿರುಗಾಳಿಯನ್ನು ಸಮುದ್ರದ ಮೇಲೆ ಬರಮಾಡಿದನು. ಸಮುದ್ರದಲ್ಲಿ ದೊಡ್ಡ ತುಫಾನು ಎದ್ದು ಹಡಗು ಒಡೆದುಹೋಗುವ ಹಾಗಾಯಿತು.
ಅವರು ಹೋಗುತ್ತಿರುವಾಗ ಸಮುದ್ರವು ಅಲ್ಲೋಲಕಲ್ಲೋಲವಾಗಿ ದೋಣಿಯು ಅಲೆಗಳಿಂದ ಮುಚ್ಚುವಂತೆ ಆಯಿತು; ಆದರೆ ಯೇಸು ನಿದ್ರಿಸುತ್ತಿದ್ದನು.
ಮೂರು ಸಾರಿ ಬಾರುಕೋಲಿನಿಂದ ನನ್ನನ್ನು ಹೊಡೆದರು. ಒಂದು ಸಾರಿ ಜನರು ನನ್ನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು. ಮೂರು ಸಾರಿ ನಾನಿದ್ದ ಹಡಗು ಒಡೆದು ಹೋಯಿತು. ಒಂದು ರಾತ್ರಿ ಒಂದು ಹಗಲು ಸಮುದ್ರದ ನೀರಿನಲ್ಲಿ ಕಳೆದೆನು.
¶ ಸಹೋದರರೇ, ನಿದ್ರೆಹೋಗುವವರ ಗತಿ ಏನೆಂದು ನೀವು ತಿಳಿಯದೆ ಇದ್ದು, ನಿರೀಕ್ಷೆಯಿಲ್ಲದವರಾಗಿರುವ ಇತರರಂತೆ ದುಃಖಿಸಬಾರದು ಎಂಬುದೇ ನಮ್ಮ ಬಯಕೆ.