¶ ಎಜ್ರನು ನೀಡಿದ ಪ್ರತಿಕ್ರಿಯೆ, “ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಅರಸನು ಯೆರೂಸಲೇಮಿನಲ್ಲಿರುವ ಯೆಹೋವನ ಆಲಯವನ್ನು ಶೋಭಾಯಮಾನದ ಸ್ಥಿತಿಗೆ ತರುವುದಕ್ಕೆ ಆತನ ಪ್ರೇರಣೆಯಿಂದಲೇ ಮನಸ್ಸುಮಾಡಿದ್ದಾನೆ. ಅರಸನು ಅವನ ಮಂತ್ರಿಗಳ ಮತ್ತು ಅವನ ಎಲ್ಲಾ ಶ್ರೇಷ್ಠರಾದ ಸರದಾರರ ಮುಂದೆ ನನಗೆ ದಯೆತೋರಿಸಿದ್ದಾನೆ.
TSK
TSK · ಅಪೊಸ್ತಲರ ಕೃತ್ಯಗ 28:10
Treasury of Scripture Knowledge references in ಕನ್ನಡ IRV.
‹ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.›
ಆ ಸಭೆಗಳವರಿಗೆ ಬಹಳ ಸಂಕಷ್ಟಗಳು ಬಂದರೂ ತಮ್ಮ ವಿಪರೀತವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.
ನನ್ನ ಅಗತ್ಯಗಳ ಕುರಿತಾಗಿ ನಾನು ಇದನ್ನು ಹೇಳುತ್ತಿಲ್ಲ, ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತೃಪ್ತನಾಗಿರುವುದನ್ನು ಕಲಿತುಕೊಂಡಿದ್ದೇನೆ.
ಇದಲ್ಲದೆ ನಾವು ಯೇಸು ಕ್ರಿಸ್ತನ ಅಪೊಸ್ತಲರಾಗಿರುವುದರಿಂದ ನಮಗೆ ಗೌರವವನ್ನು ತೋರಿಸಬೇಕೆಂದು ಹೇಳಬಹುದಾಗಿದ್ದರೂ, ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲಿ, ಇತರರಿಂದಾಗಲಿ ಪಡೆದುಕೊಳ್ಳಲು ಅಪೇಕ್ಷಿಸಲಿಲ್ಲ.
¶ ಚೆನ್ನಾಗಿ ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ದೇವರ ವಾಕ್ಯವನ್ನು ಸಾರುವುದರಲ್ಲಿಯೂ ಉಪದೇಶಿಸುವುದರಲ್ಲಿಯೂ ಕಷ್ಟಪಡುವವರನ್ನು ಎರಡುಪಟ್ಟು ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು.