TSK

TSK · ಅಪೊಸ್ತಲರ ಕೃತ್ಯಗ 28:16

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ತೆಗೆದುಕೊಂಡು ಹೋಗಿ ಐಗುಪ್ತ ದೇಶದ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದರು. ಇವನು ಅರಸನ ಮೈಗಾವಲಿನವರ ದಳಪತಿಯೂ ಆಗಿದ್ದನು.

¶ ಐದನೆಯ ತಿಂಗಳಿನ ಏಳನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ ಬಾಬೆಲಿನ ಅರಸನ ಸೇವಕನೂ, ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನ್ ಎಂಬುವವನು ಯೆರೂಸಲೇಮಿಗೆ ಬಂದನು.

ಫ್ರುಗ್ಯ, ಪಂಫುಲ್ಯ, ಐಗುಪ್ತ ಮತ್ತು ಕುರೇನೆಯ ಮಗ್ಗುಲಲ್ಲಿರುವ ಲಿಬ್ಯ, ಈ ಸೀಮೆಗಳಲ್ಲಿ ವಾಸವಾಗಿರುವವರೂ, ರೋಮಾಪುರದಿಂದ ಬಂದಿರುವ ಯೆಹೂದ್ಯರೂ, ಯೆಹೂದ್ಯ ಮತಾವಲಂಬಿಗಳೂ, ಕ್ರೇತ್ಯರೂ, ಅರಬ್ಬೀದೇಶದವರೂ

¶ ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ, ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸಿನಲ್ಲಿ ಯೋಚಿಸಿ; “ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು” ಹೇಳಿದನು.

ಅನಂತರ ಪೌಲನನ್ನು ಕಾವಲ್ಲಿನಲ್ಲಿ ಇಡಬೇಕೆಂದೂ, ಆದರೆ ಕಟ್ಟು ನಿಟ್ಟು ಬೇಕಿಲ್ಲವೆಂದೂ, ಅವನಿಗೆ ಸಂಬಂಧಪಟ್ಟವರು ಅವನಿಗೆ ಉಪಚಾರ ಮಾಡುವುದನ್ನು, ಅಡ್ಡಿಮಾಡಬಾರದೆಂದು ಶತಾಧಿಪತಿಗೆ ಅಪ್ಪಣೆಮಾಡಿದನು.

ಪೌಲನು ಶತಾಧಿಪತಿಗೂ, ಸಿಪಾಯಿಗಳಿಗೂ; “ಇವರು ಹಡಗಿನಲ್ಲಿ ಉಳಿಯದಿದ್ದರೆ ನಿಮ್ಮ ಪ್ರಾಣ ಉಳಿಯುವುದಿಲ್ಲವೆಂದು” ಹೇಳಿದನು.

¶ ತರುವಾಯ ಅವನು ತಾನೇ ಬಾಡಿಗೆಗೆ ತೆಗೆದುಕೊಂಡಿದ್ದ ಮನೆಯಲ್ಲಿ ಎರಡು ವರ್ಷಗಳ ಕಾಲ ಇದ್ದು, ತನ್ನ ಬಳಿಗೆ ಬರುವವರೆಲ್ಲರನ್ನು ಆದರದಿಂದ ಬರಮಾಡಿಕೊಳ್ಳುತ್ತಿದ್ದನು.

¶ ಈ ಕಾರಣದಿಂದ ನಿಮ್ಮ ಬಳಿಗೆ ಬರುವುದಕ್ಕೆ ನನಗೆ ಅನೇಕಾವರ್ತಿ ಅಡೆತಡೆಗಳಾದವು.

ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುವ ಅಧಿಕಾರ ಹೊಂದಿದ ಮಹಾನಗರಿಯೇ ಆಗಿದೆ.”