TSK

TSK · ಅಪೊಸ್ತಲರ ಕೃತ್ಯಗ 28:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರು ನಿಮಗೆ ಸ್ವದೇಶದವರಂತೆಯೇ ಇರಬೇಕು; ಅವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ಐಗುಪ್ತ ದೇಶದಲ್ಲಿದ್ದಾಗ ನೀವೂ ಅನ್ಯರಾಗಿದ್ದಿರಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು.

ಕೊಲೆಗೆ ಸೆಳೆಯಲ್ಪಟ್ಟವರನ್ನು ರಕ್ಷಿಸು, ಸಂಹಾರಕ್ಕೆ ಗುರಿಯಾದವರನ್ನು ತಪ್ಪಿಸು.

ಯೇಸು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ, ‹“ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನ ಬೆಟ್ಟದ ಪ್ರದೇಶದಿಂದ ಇಳಿದು ಯೆರಿಕೋ ಎಂಬ ಊರಿಗೆ ಹೋಗುತ್ತಿರುವಾಗ ಕಳ್ಳರ ಕೈಗೆ ಸಿಕ್ಕಿಬಿದ್ದನು. ಅವರು ಅವನನ್ನು ಸುಲಿಗೆ ಮಾಡಿಕೊಂಡು, ಹೊಡೆದು, ಅವನನ್ನು ಅರೆಜೀವಮಾಡಿ ಬಿಟ್ಟುಹೋದರು.›

¶ ಮರುದಿನ ಸೀದೋನಿಗೆ ತಲುಪಿದೆವು. ಯೂಲ್ಯನು ಪೌಲನಿಗೆ ದಯೆಯನ್ನು ತೋರಿಸುವವನಾಗಿ, ಅವನನ್ನು ಸ್ನೇಹಿತರ ಬಳಿಗೆ ಹೋಗಿ ಸತ್ಕಾರ ಹೊಂದುವುದಕ್ಕೆ ಅನುಮತಿಕೊಟ್ಟನು.

ಗ್ರೀಕರಿಗೂ ಇತರ ಜನಗಳಿಗೂ, ಜ್ಞಾನಿಗಳಿಗೂ, ಮೂಢರಿಗೂ ತೀರಿಸಬೇಕಾದ ಒಂದು ಋಣ ನನ್ನ ಮೇಲಿದೆ.

ನೀವು ಸುನ್ನತಿ ಮಾಡಿಸಿಕೊಂಡಿದ್ದಿರಿ; ಧರ್ಮಶಾಸ್ತ್ರವನ್ನು ಇಟ್ಟುಕೊಂಡಿದ್ದೀರಿ; ಆದರೂ ಅದನ್ನು ಮೀರಿ ನಡೆಯುತ್ತೀರಿ. ಹೀಗಿರಲಾಗಿ, ಶಾರೀರಿಕವಾಗಿ ಸುನ್ನತಿಯನ್ನು ಮಾಡಿಸಿಕೊಳ್ಳದಿದ್ದರೂ ಸ್ವಾಭಾವಿಕವಾಗಿ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರು ಸುನ್ನತಿ ಮಾಡಿಸಿಕೊಂಡಿರುವ ನಿಮಗೆ ತೀರ್ಪುಕೊಡುತ್ತಾರೆ.

ಶ್ರಮೆಪಟ್ಟು ದುಡಿದಿದ್ದೇನೆ, ಎಷ್ಟೋ ಸಾರಿ ನಿದ್ದೆಗೆಟ್ಟಿದ್ದೇನೆ; ಹಸಿವು ನೀರಡಿಕೆಗಳಿಂದ ಬಳಲಿದ್ದೇನೆ; ಅನೇಕ ಸಾರಿ ಊಟ, ಬಟ್ಟೆಯಿಲ್ಲದೆ ಅಲೆದಿದ್ದೇನೆ; ಚಳಿಗಾಳಿಯಲ್ಲಿ ನಡುಗಿದ್ದೇನೆ.

ಅತಿಥಿ ಸತ್ಕಾರಮಾಡುವುದನ್ನು ಅಲಕ್ಷ್ಯಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.