¶ ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದು ಹೋಗುವಾಗ ಪೇತ್ರನೆನಿಸಿಕೊಳ್ಳುವ ಸೀಮೋನ ಮತ್ತು ಅವನ ಸಹೋದರನಾದ ಅಂದ್ರೆಯನು ಸಮುದ್ರದಲ್ಲಿ ಬಲೆಬೀಸುವುದನ್ನು ಕಂಡನು; ಅವರು ಬೆಸ್ತರಾಗಿದ್ದರು.
TSK
TSK · ಅಪೊಸ್ತಲರ ಕೃತ್ಯಗ 4:13
Treasury of Scripture Knowledge references in ಕನ್ನಡ IRV.
¶ ಯೇಸುವನ್ನು ಹಿಡಿದವರು ಆತನನ್ನು ಮಹಾಯಾಜಕನಾದ ಕಾಯಫನ ಬಳಿಗೆ ಕರೆದುಕೊಂಡು ಹೋದರು, ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಒಟ್ಟಾಗಿ ಸೇರಿಬಂದಿದ್ದರು.
ಸ್ವಲ್ಪ ಹೊತ್ತಿನ ನಂತರ ಅಲ್ಲಿ ನಿಂತಿದ್ದವರು ಮುಂದೆ ಬಂದು ಪೇತ್ರನಿಗೆ, “ನಿಶ್ಚಯವಾಗಿ ನೀನೂ ಸಹ ಅವರಲ್ಲಿ ಒಬ್ಬನು, ನಿನ್ನ ಭಾಷೆಯೇ ನಿನ್ನನ್ನು (ಗಲಿಲಾಯದವನೆಂದು) ತೋರಿಸಿಕೊಡುತ್ತದೆ” ಎಂದು ಹೇಳಲು
ಬಳಿಕ ಯೇಸು ತನ್ನನ್ನು ಹಿಡಿಯುವುದಕ್ಕೆ ಬಂದ ಮುಖ್ಯಯಾಜಕರಿಗೂ, ದೇವಾಲಯದ ಕಾವಲಿನ ದಳವಾಯಿಗಳಿಗೂ, ಸಭೆಯ ಹಿರಿಯರಿಗೂ, ‹“ದರೋಡೆಗಾರನನ್ನು ಹಿಡಿಯುವುದಕ್ಕೆ ಬಂದಂತೆ ಕತ್ತಿಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ಬಂದಿರುವಿರಾ?›
ಯೆಹೂದ್ಯರು ಅದಕ್ಕೆ ಆಶ್ಚರ್ಯಪಟ್ಟು, “ಶಾಸ್ತ್ರಭ್ಯಾಸ ಮಾಡದಿರುವ ಈತನಿಗೆ ಶಾಸ್ತ್ರಗಳು ತಿಳಿದಿರುವುದಾದರೂ ಹೇಗೆ?” ಎಂದರು.
ಆದರೆ ಪೇತ್ರನು ಹೊರಗೆ ಬಾಗಿಲಿನ ಬಳಿಯಲ್ಲಿ ನಿಂತಿದ್ದನು. ಮಹಾಯಾಜಕನ ಪರಿಚಯವಿದ್ದ ಆ ಇನ್ನೊಬ್ಬ ಶಿಷ್ಯನು ಹೊರಗೆ ಬಂದು ದ್ವಾರಪಾಲಕಿಗೆ ಹೇಳಿ ಪೇತ್ರನನ್ನು ಒಳಗೆ ಕರೆದುಕೊಂಡು ಬಂದನು.
ಎಲ್ಲರೂ ವಿಸ್ಮಯದಿಂದ ಬೆರಗಾಗಿ, “ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ.