TSK

TSK · ಅಪೊಸ್ತಲರ ಕೃತ್ಯಗ 5:24

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾವು ಕೇಳಿದ ಸಂಗತಿಯನ್ನು ನಮ್ಮಲ್ಲಿ ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು?

¶ “ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.

¶ ಇನ್ನೂ ಆತನು ಹೇಳಿದ್ದು; ‹“ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸೋಣ? ಯಾವ ಸಾಮ್ಯದಿಂದ ಅದನ್ನು ತೋರಿಸಿಕೊಡೋಣ?›

ಬಳಿಕ ಯೇಸು ತನ್ನನ್ನು ಹಿಡಿಯುವುದಕ್ಕೆ ಬಂದ ಮುಖ್ಯಯಾಜಕರಿಗೂ, ದೇವಾಲಯದ ಕಾವಲಿನ ದಳವಾಯಿಗಳಿಗೂ, ಸಭೆಯ ಹಿರಿಯರಿಗೂ, ‹“ದರೋಡೆಗಾರನನ್ನು ಹಿಡಿಯುವುದಕ್ಕೆ ಬಂದಂತೆ ಕತ್ತಿಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ಬಂದಿರುವಿರಾ?›

ಹೀಗಿರಲಾಗಿ ಫರಿಸಾಯರು, “ನಮ್ಮ ಯತ್ನವೇನೂ ನಡೆಯಲಿಲ್ಲ ನೋಡಿರಿ, ಲೋಕವೆಲ್ಲಾ ಆತನ ಹಿಂದೆ ಹೋಯಿತಲ್ಲಾ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.

¶ ಅಪೊಸ್ತಲರು ಜನರಿಗೆ ಉಪದೇಶಮಾಡುತ್ತಿರುವಾಗಲೇ ಯಾಜಕರೂ, ದೇವಾಲಯದ ಅಧಿಪತಿಯೂ, ಸದ್ದುಕಾಯರೂ ಅವರಿಗೆ ವಿರೋಧವಾಗಿ ಬಂದರು.

ನಡೆದಿದ್ದ ಸೂಚಕ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಿದ್ದ ಕಾರಣ ಅವರ ದೆಸೆಯಿಂದ ಸಭೆಯವರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟು ಬಿಟ್ಟರು.