TSK

TSK · ಅಪೊಸ್ತಲರ ಕೃತ್ಯಗ 5:29

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅನಂತರ ಆ ಪುರುಷನಿಗೆ, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ಥವಾಯಿತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು.

¶ ಆದರೆ ಅರಸನು ಯೋವಾಬನಿಗೂ ಇತರ ಸೇನಾಧಿಪತಿಗಳಿಗೂ ಕಿವಿಗೊಡದೆ, ತನ್ನ ಮಾತನ್ನೇ ಸಾಧಿಸಿದ್ದರಿಂದ ಅವರು ಇಸ್ರಾಯೇಲರನ್ನು ಲೆಕ್ಕಿಸುವುದಕ್ಕಾಗಿ ಅರಸನ ಸನ್ನಿಧಿಯಿಂದ ಹೊರಟು ಹೋದರು.

‹ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಉಪದೇಶವನ್ನಾಗಿ ಅವರು ಬೋಧಿಸುವುದರಿಂದ› ‹ನನಗೆ ಆರಾಧನೆ ಮಾಡುವುದು ವ್ಯರ್ಥ’ ಎಂಬುದೇ.›

¶ ಅವನ ಹಿಂದೆ ಎರಡನೆಯ ದೇವದೂತನು ಬಂದು, “ಬಿದ್ದಳು! ಬಿದ್ದಳು! ಬಾಬೆಲೆಂಬ ಮಹಾನಗರಿಯು ಬಿದ್ದಳು, ಆಕೆಯು ಸಕಲ ಜನಾಂಗಗಳಿಗೆ ತನ್ನ ಅತಿ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿಸಿದಳು” ಎಂದು ಹೇಳಿದನು.