TSK

TSK · ಅಪೊಸ್ತಲರ ಕೃತ್ಯಗ 5:33

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ದುಷ್ಟನು ನೀತಿವಂತನಿಗೆ ವಿರುದ್ಧವಾಗಿ ಆಲೋಚಿಸುತ್ತಾನೆ; ಅವನನ್ನು ನೋಡಿ ಹಲ್ಲುಕಡಿಯುತ್ತಾನೆ.

ದುಷ್ಟರ ಒಳಸಂಚಿಗೂ, ಕೆಡುಕರ ಗುಪ್ತ ಆಲೋಚನೆಗೂ ಸಿಕ್ಕದಂತೆ, ನನ್ನನ್ನು ತಪ್ಪಿಸಿ ಭದ್ರಪಡಿಸು.

‹ಗುರುವಿನಂತೆ ಆಗುವುದು ಶಿಷ್ಯನಿಗೆ ಸಾಕು, ಒಡೆಯನಂತೆ ಆಗುವುದು ಆಳಿಗೆ ಸಾಕು. ಅವರು ಮನೆಯ ಯಜಮಾನನಿಗೆ›‹ಬೆಲ್ಜೆಬೂಲನೆಂದು ಹೆಸರಿಟ್ಟು ಕರೆದ ಮೇಲೆ ಆತನ ಮನೆಯವರನ್ನು ಇನ್ನೆಷ್ಟು ಅವಹೇಳನವಾಗಿ ಕರೆದಾರು?›

¶ ‹“ಆಗ ನಿಮ್ಮನ್ನು ಕಷ್ಟಸಂಕಟಗಳಿಗೆ ಗುರಿಮಾಡಿ ಕೊಲ್ಲುವರು; ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲಾ ಜನಾಂಗಗಳವರು ದ್ವೇಷಿಸುವರು.›

ಆದರೆ ಅವರು ಕ್ರೋಧಭರಿತರಾಗಿದ್ದರಿಂದ, ಈ ಯೇಸುವಿಗೆ ಏನು ಮಾಡೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

¶ ಬಳಿಕ ಆತನು ದೇವಾಲಯಕ್ಕೆ ಹೋಗಿ ವ್ಯಾಪಾರಮಾಡುವವರನ್ನು ಹೊರಹಾಕುವುದಕ್ಕೆ ಪ್ರಾರಂಭಿಸಿ ಅವರಿಗೆ,

‹ದಣಿಗಿಂತ ಆಳು ದೊಡ್ಡವನಲ್ಲವೆಂಬುದಾಗಿ ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕ ಮಾಡಿಕೊಳ್ಳಿರಿ. ಅವರು ನನ್ನನ್ನು ಹಿಂಸೆಪಡಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಕೈಗೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಗೊಳ್ಳುತ್ತಿದ್ದರು.›

¶ ಅವರು ಇದನ್ನು ಕೇಳಿದಾಗ ಅವರ ಹೃದಯಗಳಲ್ಲಿ ಅಲಗು ನೆಟ್ಟಂತಾಯಿತು. ಅಲ್ಲದೆ ಅವರು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ, “ಸಹೋದರರೇ, ನಾವೇನು ಮಾಡಬೇಕು” ಎಂದು ಕೇಳಲು;

¶ ಅನೇಕ ದಿನಗಳು ಕಳೆದ ಮೇಲೆ, ಯೆಹೂದ್ಯರು ಅವನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.