ಇವರು ದಿವ್ಯದರ್ಶಿಗಳಿಗೆ, “ನಿಮಗೆ ದರ್ಶನವಾಗದಿರಲಿ” ಎನ್ನುತ್ತಾರೆ, ಮತ್ತು ಪ್ರವಾದಿಗಳಿಗೆ, “ನಮಗಾಗಿ ನ್ಯಾಯವಾದವುಗಳನ್ನು ಪ್ರವಾದಿಸಬೇಡಿರಿ, ನಯವಾದವುಗಳನ್ನು ನಮಗೆ ನುಡಿಯಿರಿ, ಮೋಸವಾದವುಗಳನ್ನೇ ಪ್ರವಾದಿಸಿರಿ ಎನ್ನುತ್ತಾರೆ.
TSK
TSK · ಅಪೊಸ್ತಲರ ಕೃತ್ಯಗ 5:40
Treasury of Scripture Knowledge references in ಕನ್ನಡ IRV.
ಆಹಾ, ಆ ಕೆಡುಕರು “ಪ್ರವಾದನೆ ಮಾಡಬೇಡಿರಿ. ಇಂಥ ವಿಷಯಗಳಲ್ಲಿ ಪ್ರವಾದನೆಯನ್ನು ಎತ್ತಬಾರದು, ದೂಷಣೆಗಳು ತೊಲಗುವುದೇ ಇಲ್ಲ” ಎಂದು ಪ್ರವಾದನೆ ಮಾಡುತ್ತಾರೆ.
‹ಆದುದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ನೀವು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಚಾಟಿಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.›
‹ಫಲಕಾಲ ಬಂದಾಗ ದ್ರಾಕ್ಷಿಯ ತೋಟದ ಪಾಲನ್ನು ತೆಗೆದುಕೊಳ್ಳುವುದಕ್ಕಾಗಿ ಒಬ್ಬ ಆಳನ್ನು ಒಕ್ಕಲಿಗರ ಬಳಿಗೆ ಕಳುಹಿಸಿದನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿಗೈಯಲ್ಲಿ ಕಳುಹಿಸಿಬಿಟ್ಟರು.›
ಆದರೆ ಇದು ಜನರಲ್ಲಿ ಇನ್ನೂ ಹರಡದಂತೆ ಮುಂದೆ ಆ ಯೇಸುವಿನ ಹೆಸರನ್ನು ಎತ್ತಿ ಇನ್ನು ಮೇಲೆ ಯಾರ ಸಂಗಡಲೂ ಮಾತನಾಡಬಾರದೆಂದು ಅವರನ್ನು ಬೆದರಿಸೋಣ ಎಂಬುದಾಗಿ ಅವರು ಪರಸ್ಪರ ಆಲೋಚನೆ ಮಾಡಿಕೊಂಡರು.”
ಐದು ಸಾರಿ ಯೆಹೂದ್ಯರಿಂದ ನನಗೆ ಒಂದು ಕಡಿಮೆ ನಲವತ್ತು ಏಟುಗಳು ಬಿದ್ದವು.