TSK

TSK · ಅಪೊಸ್ತಲರ ಕೃತ್ಯಗ 7:15

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯಾಕೋಬನು ತನ್ನ ಮಕ್ಕಳಿಗೆ ಅಪ್ಪಣೆ ಕೊಡುವುದನ್ನು ಮುಗಿಸಿದ ನಂತರ ಹಾಸಿಗೆಯ ಮೇಲೆ ತನ್ನ ಕಾಲುಗಳನ್ನು ಮಡಚಿಕೊಂಡು ಪ್ರಾಣಬಿಟ್ಟು ಪೂರ್ವಿಕರ ಬಳಿಗೆ ಸೇರಿದನು.

ನಮ್ಮ ಪೂರ್ವಿಕರು ಐಗುಪ್ತ ದೇಶಕ್ಕೆ ಇಳಿದು ಹೋದರು. ಅವರು ಅಲ್ಲಿ ಬಹುದಿನ ವಾಸವಾಗಿದ್ದರು. ಐಗುಪ್ತ್ಯರು ನಮ್ಮನ್ನೂ ಮತ್ತು ನಮ್ಮ ಪೂರ್ವಿಕರನ್ನೂ ಉಪದ್ರವಪಡಿಸಿದ್ದರು.

ಆಗ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ, “ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಅಲೆದಾಡುತ್ತಾ ಸ್ವಲ್ಪ ಜನರೊಡನೆ ಐಗುಪ್ತದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಅವರು ಮಹಾಬಲಿಷ್ಠ ಜನಾಂಗವಾದರು.

ಯಾಕೋಬನು ತಾನು ಮರಣ ಹೊಂದುವ ಸಮಯದಲ್ಲಿ ನಂಬಿಕೆಯಿಂದಲೇ ಯೋಸೇಫನ ಮಕ್ಕಳಿಬ್ಬರನ್ನು ಆಶೀರ್ವದಿಸಿದನು. ತನ್ನ ಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು.