TSK

TSK · ಅಪೊಸ್ತಲರ ಕೃತ್ಯಗ 7:27

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ನಾಬಾಲನ ಸೇವಕರಲ್ಲಿ ಒಬ್ಬನು ಅವನ ಹೆಂಡತಿಯಾದ ಅಬೀಗೈಲಳಿಗೆ, “ಮರುಭೂಮಿಯಲ್ಲಿರುವ ದಾವೀದನು ನಮ್ಮ ಧಣಿಯ ಕ್ಷೇಮವಿಚಾರಕ್ಕಾಗಿ ದೂತರನ್ನು ಕಳುಹಿಸಲು, ಧಣಿಯು ಬಂದವರನ್ನು ಬೈದನು ಕಳುಹಿಸಿದನು.

¶ ತರುವಾಯ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿರುವಾಗ ಮುಖ್ಯಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು, “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಕೇಳಿದರು.

ಯೇಸು, ‹“ನನ್ನ ರಾಜ್ಯವು ಈ ಲೋಕದ್ದಲ್ಲ. ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರ ಕೈಗೆ ಒಪ್ಪಿಸಲ್ಪಡದಂತೆ ನನ್ನ ಸೇವಕರು ನನ್ನ ಪರವಾಗಿ ಹೋರಾಡುತ್ತಿದ್ದರು, ಆದರೆ ನನ್ನ ರಾಜ್ಯವು ಇಲ್ಲಿಯದಲ್ಲ”› ಎಂದು ಉತ್ತರಕೊಟ್ಟನು.

ನಮ್ಮ ಪೂರ್ವಿಕರಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಪಿಲಾತನಿಗೆ ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ, ಆತನ ಮುಂದೆ ಆತನನ್ನು ಧಿಕ್ಕರಿಸಿ ಬೇಡವೆಂದು ಕೂಗಿದ್ದೀರಿ.

¶ “ಮನೆಕಟ್ಟುವವರಾದ ನೀವು ಬೇಡವೆಂದು ಬಿಟ್ಟಕಲ್ಲೇ ಆತನು; ಆತನೇ ಬಹು ಮುಖ್ಯವಾದ ಮೂಲೆಗಲ್ಲಾದನು.

¶ “ಅವರು ಯಾವ ಮೋಶೆಯನ್ನು ಬೇಡವೆಂದು ನಿರಾಕರಿಸಿ ‘ನಿನ್ನನ್ನು ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?’ ಎಂದು ಕೇಳಿದರೋ, ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ, ಬಿಡುಗಡೆಮಾಡುವವನನ್ನಾಗಿಯೂ ನೇಮಿಸಿದನು.