TSK

TSK · ಅಪೊಸ್ತಲರ ಕೃತ್ಯಗ 7:52

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಯೆಹೋವನು ಸಮುವೇಲನಿಗೆ, “ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳ್ವಿಕೆಯನ್ನು ಬೇಡವೆನ್ನುತ್ತಿದ್ದಾರೆ.

ಅದಕ್ಕೆ ಅವನು, “ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು.

ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.

ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ನೀವು ತಿದ್ದಿ ನಡೆಯಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.”

ಆದರೆ ನೀವು ನನ್ನನ್ನು ಕೊಂದು ಹಾಕಿದ ಪಕ್ಷಕ್ಕೆ, ನೀವೂ, ಈ ಪಟ್ಟಣವೂ ಮತ್ತು ಇದರ ನಿವಾಸಿಗಳೂ ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ಪಾತ್ರರಾಗುವಿರಿ ಎಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ಮಾತುಗಳನ್ನೆಲ್ಲಾ ನಿಮ್ಮ ಕಿವಿಗೆ ಮುಟ್ಟಿಸುವಂತೆ ಯೆಹೋವನು ನನ್ನನ್ನು ಕಳುಹಿಸಿರುವುದು ಖಂಡಿತ” ಎಂದು ಹೇಳಿದನು.

¶ ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.

‹ತೋಟಗಾರರು ಅವನ ಆಳುಗಳನ್ನು ಹಿಡಿದು ಒಬ್ಬನನ್ನು ಹೊಡೆದರು, ಮತ್ತೊಬ್ಬನನ್ನು ಕಡಿದು ಹಾಕಿದರು, ಇನ್ನೊಬ್ಬನನ್ನು ಕಲ್ಲೆಸೆದು ಕೊಂದರು.›

‹ನಿಮ್ಮ ಗತಿಯನ್ನು ಏನು ಹೇಳಲಿ? ನೀವು ಪ್ರವಾದಿಗಳ ಗೋರಿಗಳನ್ನು ಕಟ್ಟುತ್ತೀರಿ. ಅವರನ್ನು ಕೊಂದವರು ನಿಮ್ಮ ಪೂರ್ವಿಕರೇ.›

ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ.

ಆದರೆ, ಕ್ರಿಸ್ತನು ಕಷ್ಟಗಳನ್ನನುಭವಿಸಬೇಕೆಂದು, ದೇವರು ಎಲ್ಲಾ ಪ್ರವಾದಿಗಳ ಮೂಲಕ ಮುಂಚಿತವಾಗಿ ಹೇಳಿಸಿದ ಮಾತುಗಳನ್ನು ಹೀಗೆ ನೆರವೇರಿಸಿದನು.

ನೀವು ಶಿಲುಬೆಗೆ ಹಾಕಿಸಿದಂತಹ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂತಹ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ಸೌಖ್ಯಹೊಂದಿದದವನಾಗಿ ನಿಮ್ಮೆದುರಿನಲ್ಲಿ ನಿಂತಿದ್ದಾನೆ ಎಂಬುದನ್ನು ನೀವು ಮತ್ತು ಇಸ್ರಾಯೇಲ್ ಜನರೆಲ್ಲರಿಗೂ ಈ ಸಂಗತಿ ತಿಳಿದಿರಲಿ.

¶ “ಆಗ ಅವನು; ‘ನಮ್ಮ ಪೂರ್ವಿಕರ ದೇವರು, ತನ್ನ ಚಿತ್ತವನ್ನು ನೀನು ತಿಳಿದುಕೊಳ್ಳುವುದಕ್ಕೂ, ಆ ನೀತಿವಂತನನ್ನು ನೋಡುವುದಕ್ಕೂ, ಆತನ ಬಾಯಿಂದ ಬಂದ ಮಾತನ್ನು ಕೇಳುವುದಕ್ಕೂ ನಿನ್ನನ್ನು ನೇಮಿಸಿದ್ದಾನೆ.

ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಯನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬುದನ್ನು ಅವರು ಪರಿಶೋಧನೆ ಮಾಡಿದರು.

¶ ‹“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ,›‹ಪರಿಶುದ್ಧನೂ,›‹ಸತ್ಯವಂತನೂ,›‹ದಾವೀದನ ಬೀಗದಕೈಯುಳ್ಳವನೂ, ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ,›‹ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ,›