TSK

TSK · ಅಪೊಸ್ತಲರ ಕೃತ್ಯಗ 7:58

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

“ದೂಷಿಸಿದ ಆ ಮನುಷ್ಯನನ್ನು ಪಾಳೆಯದ ಹೊರಗೆ ಒಯ್ಯಬೇಕು. ಅವನ ದೂಷಣೆಯ ಮಾತುಗಳನ್ನು ಕೇಳಿದವರೆಲ್ಲರೂ ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು.

ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತು ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆ ಎಂಬುದಾಗಿ ಜನರ ಎದುರಿನಲ್ಲಿ ಅವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.

ಯೇಸು ದೇವಾಲಯದೊಳಗೆ ಸೊಲೊಮೋನನ ಮಂಟಪದಲ್ಲಿ ತಿರುಗಾಡುತ್ತಾ ಇರುವಾಗ,

ಆ ಸಾಕ್ಷಿಗಳು, “ಈ ಮನುಷ್ಯನು ಈ ಪರಿಶುದ್ಧವಾದ ಸ್ಥಳಕ್ಕೆ ವಿರೋಧವಾಗಿಯೂ, ಧರ್ಮಶಾಸ್ತ್ರಕ್ಕೆ ವಿರೋಧವಾಗಿಯೂ ಮಾತನಾಡುವುದನ್ನು ನಿಲ್ಲಿಸುತ್ತಿಲ್ಲ ಎಂದು ಹೇಳಿದರು.

¶ ಸೌಲನು ಇನ್ನೂ ಕರ್ತನ ಶಿಷ್ಯರ ಮೇಲೆ ಕೋಪವುಳ್ಳನಾಗಿದ್ದು ಬೆದರಿಕೆಯ ಮಾತುಗಳನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಆಲೋಚಿಸುತ್ತಾ ಮಹಾಯಾಜಕನ ಬಳಿಗೆ ಹೋಗಿ;

ಮತ್ತು ನಿನ್ನ ಸಾಕ್ಷಿಯಾದ ಸ್ತೆಫನನ ರಕ್ತವು ಚೆಲ್ಲಿಸಲ್ಪಟ್ಟಾಗ, ನಾನೂ ಹತ್ತಿರ ನಿಂತು ಅದನ್ನು ಸಮ್ಮತಿಸಿ, ಅವನನ್ನು ಕೊಂದವರ ವಸ್ತ್ರಗಳನ್ನು ಕಾಯುತ್ತಿದ್ದೆನಲ್ಲಾ’ ಎಂಬುದು ಅವರೇ ಬಲ್ಲವರಾಗಿದ್ದಾರೆ.