TSK

TSK · ಅಪೊಸ್ತಲರ ಕೃತ್ಯಗ 8:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

‹ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.›

ದೇವರ ರಾಜ್ಯದ ವಿಷಯವನ್ನು ಸಾರುವುದಕ್ಕೂ ಅಸ್ವಸ್ಥರಾದವರನ್ನು ಸ್ವಸ್ಥಮಾಡುವುದಕ್ಕೂ ಅವರನ್ನು ಕಳುಹಿಸಿದನು.

¶ ಯೇಸುವು ಬಾಧೆಪಟ್ಟು ಸತ್ತ ನಂತರ ತಾನು ಜೀವಂತನಾಗಿ ಎದ್ದು ಬಂದಿದ್ದೇನೆ ಎಂದು ಅನೇಕ ಸಂಭವಗಳ ಮೂಲಕ ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಸ್ಪಷ್ಟಪಡಿಸಿದನು. ಸತತವಾಗಿ ನಲವತ್ತು ದಿನಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯದ ವಿಷಯವನ್ನು ಕುರಿತು ಅವರಿಗೆ ಬೋಧಿಸಿದನು.

ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನಮಾಡಿಸಿ ಕೊಂಡರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಕೊಂಡರು.

ಫಿಲಿಪ್ಪನು ಬೋಧಿಸುವುದಕ್ಕೆ ತೊಡಗಿ ಅದೇ ವಚನವನ್ನು ಆಧಾರಮಾಡಿಕೊಂಡು ಅವನಿಗೆ ಯೇಸುವಿನ ವಿಷಯವಾದ ಸುವಾರ್ತೆಯನ್ನು ತಿಳಿಸಿದನು.

ಅವರಲ್ಲಿ ಕುಪ್ರದ್ವೀಪದವರು ಕೆಲವರೂ, ಕುರೇನ್ಯದವರು ಕೆಲವರೂ, ಅಂತಿಯೋಕ್ಯಕ್ಕೆ ಬಂದು, ಗ್ರೀಕರೊಂದಿಗೆ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ಸಾರಿದರು.

ಅವರು; “ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆಹೊಂದುವರು” ಎಂದು ಹೇಳಿ,

ಯೆಹೂದ್ಯರಿಗೂ, ಗ್ರೀಕರಿಗೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ದೃಢವಾಗಿ ಬೋಧಿಸುವವನಾಗಿದ್ದೆನು, ಇದೆಲ್ಲಾ ನಿಮಗೇ ತಿಳಿದಿದೆ.

ಯಾವ ಅಡ್ಡಿಯೂ ಇಲ್ಲದೆ, ತುಂಬಾ ಧೈರ್ಯದಿಂದ ದೇವರ ರಾಜ್ಯದ ಕುರಿತು ಬೋಧಿಸುತ್ತಾ, ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿ ಉಪದೇಶಮಾಡುತ್ತಾ ಇದ್ದನು.

ಆದರೂ ಕರ್ತನ ವಿಷಯದಲ್ಲಿ ಪುರುಷರಿಲ್ಲದೆ ಸ್ತ್ರೀಯರೂ, ಸ್ತ್ರೀಯರಿಲ್ಲದೆ ಪುರುಷರೂ ಇಲ್ಲ.

ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ದೇಹದ ಮೇಲಿನ ಕೊಳೆಯನ್ನು ಹೊಗಲಾಡಿಸುವಂಥದ್ದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದಾಗಿದೆ.