TSK

TSK · ಅಪೊಸ್ತಲರ ಕೃತ್ಯಗ 8:18

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅನಂತರ, ನಾಮಾನನು ತನ್ನ ಪರಿವಾರದವರೊಡನೆ, ಹಿಂದಿರುಗಿ ದೇವರ ಮನುಷ್ಯನ ಹತ್ತಿರ ಹೋಗಿ, ಅವನ ಮುಂದೆ ನಿಂತು, “ಇಸ್ರಾಯೇಲ್ ದೇಶದಲ್ಲಿರುವ ದೇವರ ಹೊರತಾಗಿ ಲೋಕದಲ್ಲಿ ಬೇರೆ ದೇವರು ಇರುವುದೇ ಇಲ್ಲವೆಂಬುದು ಈಗ ನನಗೆ ಗೊತ್ತಾಯಿತು. ನೀನು ದಯವಿಟ್ಟು ಕಾಣಿಕೆಯನ್ನು ಅಂಗೀಕರಿಸಬೇಕು” ಎಂದು ಹೇಳಿದನು.

ನೀವು ಜವೆಗೋದಿಯ ಹಿಡಿಗಳನ್ನೂ, ರೊಟ್ಟಿಯ ಚೂರುಗಳನ್ನೂ ಆಶಿಸಿ ಸುಳ್ಳು ಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳುವುದರಿಂದ ಜೀವಿಸತಕ್ಕವರನ್ನು ಸಾಯಿಸಿ, ಸಾಯತಕ್ಕವರನ್ನು ಉಳಿಸಿ, ನನ್ನ ಜನರ ನಡುವೆ ನನ್ನ ಘನತೆಗೆ ಕುಂದುತಂದಿದ್ದೀರಿ.’

ಇದಲ್ಲದೆ ಬುದ್ಧಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ನಿತ್ಯವಾದ ಕಚ್ಚಾಟಗಳು ಉಂಟಾಗುತ್ತವೆ.