TSK

TSK · ಅಪೊಸ್ತಲರ ಕೃತ್ಯಗ 8:32

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನು ಮೌನವಾಗಿದ್ದೆನು; ಒಳ್ಳೆಯದನ್ನಾದರೂ ಆಡದೆ ಸುಮ್ಮನಿದ್ದೆನು; ಆದರೆ ನನ್ನ ಸಂಕಟವು ಹೆಚ್ಚಿತು.

ತಿನ್ನತಕ್ಕ ಕುರಿಗಳನ್ನೋ ಎಂಬಂತೆ ನಮ್ಮನ್ನು ವಂಚಕರಿಗೆ ಒಪ್ಪಿಸಿದಿ; ಜನಾಂಗಗಳಲ್ಲಿ ನಮ್ಮನ್ನು ಚದರಿಸಿದ್ದೀ.

ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಗೆ ಸಮಾನನಾಗಿದ್ದೆನು. “ಮರವನ್ನು ಫಲಸಹಿತವಾಗಿ ನಾಶಪಡಿಸೋಣ, ಇವನು ನಿರ್ನಾಮವಾಗುವಂತೆ ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ” ಎಂದು ಅವರು ನನಗೆ ವಿರುದ್ಧವಾಗಿ ಕುಯುಕ್ತಿಗಳನ್ನು ಕಲ್ಪಿಸಿದ್ದು ನನಗೆ ತಿಳಿದಿರಲಿಲ್ಲ.

“ನಾನು ಅವರನ್ನು ಕುರಿ, ಟಗರು ಮತ್ತು ಹೋತಗಳ ಹಾಗೆ ವಧ್ಯಸ್ಥಾನಕ್ಕೆ ಬರಮಾಡುವೆನು.

ಆಗ ಯೇಸು, ‹“ತಂದೆಯೇ, ಅವರನ್ನು ಕ್ಷಮಿಸು ತಾವು ಏನು ಮಾಡುತ್ತೇವೆಂಬುದನ್ನು ಅವರು ಅರಿಯರು”› ಅಂದನು. ಆ ಮೇಲೆ ಚೀಟು ಹಾಕಿ ಯೇಸುವಿನ ಬಟ್ಟೆಗಳನ್ನು ಪಾಲು ಮಾಡಿದರು.

ಹೀಗೆ ‹“ನೀನು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ನಾನು ಕಳೆದುಕೊಳ್ಳಲಿಲ್ಲ”› ಎಂದು ತಾನೇ ಹೇಳಿದ ಮಾತು ನೆರವೇರಿತು.

ಯೇಸು ಕ್ರಿಸ್ತನೆಂಬ ನಿಷ್ಕಳಂಕವೂ, ನಿರ್ಮಲವೂ ಆದ ಕುರಿಮರಿಯ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.