ಅನಂತರ ಅವರು ಅವನಿಗೆ, “ನಿನ್ನ ಸೇವಕರಾದ ನಮ್ಮಲ್ಲಿ ಐವತ್ತು ಮಂದಿ ಬಲಿಷ್ಠಜನರಿದ್ದಾರೆ. ನಿನ್ನ ಯಜಮಾನನ್ನು ಹುಡುಕುವುದಕ್ಕೆ ಅವರಿಗೆ ಅಪ್ಪಣೆಯಾಗಲಿ ಯೆಹೋವನ ಆತ್ಮವು ಅವನನ್ನು ಎತ್ತಿಕೊಂಡು ಹೋಗಿ ಒಂದು ಬೆಟ್ಟದ ಮೇಲಾಗಲಿ ತಗ್ಗಿನಲ್ಲಾಗಲಿ ಇಟ್ಟಿರಬಹುದು” ಎಂದು ಹೇಳಿದರು. ಅವನು ಅವರಿಗೆ, “ನೀವು ಅವರನ್ನು ಕಳುಹಿಸಬೇಡಿರಿ” ಎಂದನು.
TSK
TSK · ಅಪೊಸ್ತಲರ ಕೃತ್ಯಗ 8:39
Treasury of Scripture Knowledge references in ಕನ್ನಡ IRV.
ನಿನ್ನ ಕಟ್ಟಳೆಗಳನ್ನು ನನ್ನ ನಿತ್ಯಸ್ವತ್ತಾಗಿ ಆರಿಸಿಕೊಂಡಿದ್ದೇನೆ, ಅವು ನನ್ನ ಹೃದಯಕ್ಕೆ ಉಲ್ಲಾಸಕರವಾಗಿವೆ.
ನೀವು ಆನಂದಭರಿತರಾಗಿ ಹೊರಡುವಿರಿ, ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ; ಬೆಟ್ಟ ಗುಡ್ಡಗಳು ನಿಮ್ಮ ಮುಂದೆ ಜಯಘೋಷ ಮಾಡುವವು.
ತಾಯಿ ಮಗನನ್ನು ಸಂತೈಸುವ ಪ್ರಕಾರ ನಾನು ನಿಮ್ಮನ್ನು ಸಂತೈಸುವೆನು; ಯೆರೂಸಲೇಮಿನಲ್ಲೇ ನಿಮಗೆ ದುಃಖಶಮನವಾಗುವುದು.
ಆಗ ಆ ತೇಜೋರೂಪಿಯು ಮನುಷ್ಯ ಹಸ್ತದಂಥ ಹಸ್ತವನ್ನು ಚಾಚಿ ನನ್ನ ತಲೆಯ ಕೂದಲಿನಿಂದ ಹಿಡಿಯಲು ದೇವರಾತ್ಮವು ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಯೆರೂಸಲೇಮಿನವರೆಗೆ ಒಯ್ದು, ಒಳಗಣ ಪ್ರಾಕಾರದ ಉತ್ತರ ಬಾಗಿಲ ಮುಂದೆ, ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ಆ ದೇವದರ್ಶನದಲ್ಲಿ ನನಗೆ ಕಂಡು ಬಂದಿತು.
ಆಮೇಲೆ ದೇವರಾತ್ಮ ಪರವಶನಾದ ನನ್ನನ್ನು ಎತ್ತಿ, ದಿವ್ಯ ದರ್ಶನದ ಮುಖಾಂತರ ಕಸ್ದೀಯರ ದೇಶದಲ್ಲಿ ಸೆರೆಯಾದವರ ಬಳಿಗೆ ಕರೆತಂದಿತು. ನನಗಾದ ದಿವ್ಯದರ್ಶನವು ಆಗ ಮಾಯವಾಯಿತು.
¶ ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡ ನೀರಿನಿಂದ ಮೇಲಕ್ಕೆ ಬಂದ ಕೂಡಲೇ ಇಗೋ, ಆತನಿಗಾಗಿ ಪರಲೋಕವು ತೆರೆಯಿತು; ಮತ್ತು ದೇವರ ಆತ್ಮವು ಪಾರಿವಾಳದ ಹಾಗೆ ತನ್ನ ಮೇಲೆ ಇಳಿದು ಬರುವುದನ್ನು ಕಂಡನು.
ಯೇಸುವು ನೀರಿನೊಳಗಿನಿಂದ ಮೇಲಕ್ಕೆ ಬಂದ ಕೂಡಲೇ ಪರಲೋಕವು ತೆರೆಯಲ್ಪಟ್ಟು ದೇವರಾತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿಯುವುದನ್ನು ಕಂಡನು.
ಶಿಷ್ಯರಾದವರು ಸಂತೋಷಭರಿತರೂ, ಪವಿತ್ರಾತ್ಮಭರಿತರೂ ಆಗಿದ್ದರು.
ಈಗ ನಾವು ನೆಲೆಗೊಂಡಿರುವ ದೇವರ ಕೃಪಾಶ್ರಯಕ್ಕೆ ಆತನ ಮುಖಾಂತರವೇ ನಂಬಿಕೆಯಿಂದ ಸೇರಿದವರಾಗಿದ್ದೇವೆ ಮತ್ತು ದೇವರ ಮಹಿಮೆಯ ನಿರೀಕ್ಷೆಯಲ್ಲಿ ಉಲ್ಲಾಸಪಡುತ್ತೇವೆ.
ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು. ಅವನು ಹದಿನಾಲ್ಕು ವರ್ಷಗಳ ಹಿಂದೆ ಮೂರನೆಯ ಸ್ವರ್ಗಕ್ಕೆ ಒಯ್ಯಲ್ಪಟ್ಟನು. ಅವನು ದೇಹಸಹಿತನಾಗಿ ಒಯ್ಯಲ್ಪಟ್ಟನೋ, ಅಥವಾ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನರಿಯೆನು, ದೇವರೇ ಬಲ್ಲನು.
¶ ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ, ಸಂತೋಷಪಡಿರಿ ಎಂದು ಪುನಃ ಹೇಳುತ್ತೇನೆ.
ಆದರೆ ನೀವು ನಿಮ್ಮ ಅಹಂನಿಂದ ಹೊಗಳಿಕೊಳ್ಳುತ್ತೀರಿ. ಅಂಥ ಹೊಗಳಿಕೆಯೆಲ್ಲಾ ಕೆಟ್ಟದ್ದೇ.