ಆದರೆ ಆ ಕಷ್ಟದಲ್ಲಿ ಮನಸ್ಸೆಯು ತನ್ನ ದೇವರಾದ ಯೆಹೋವನ ಪ್ರಸನ್ನತೆಯನ್ನು ಬೇಡಿಕೊಂಡನು. ಅವನು ತನ್ನ ಪೂರ್ವಿಕರ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನನ್ನು ಪ್ರಾರ್ಥಿಸಲು
TSK
TSK · ಅಪೊಸ್ತಲರ ಕೃತ್ಯಗ 9:11
Treasury of Scripture Knowledge references in ಕನ್ನಡ IRV.
ಅವನ ಆತ್ಮವನ್ನು ಅಧೋಲೋಕಕ್ಕೆ ಬೀಳದಂತೆ ತಡೆದು, ಅವನ ಜೀವವನ್ನು ದೈವಾಸ್ತ್ರದಿಂದ ಅಳಿದು ಹೋಗದ ಹಾಗೆ ನಿಲ್ಲಿಸುವನು.
ನಾನು ಯೆಹೋವನಿಗಾಗಿ ನಿರೀಕ್ಷಿಸಿಯೇ ನಿರೀಕ್ಷಿಸಿದೆನು; ಆತನು ನನ್ನ ಮೊರೆಗೆ ಕಿವಿಗೊಟ್ಟು ಲಕ್ಷಿಸಿದನು.
ಯೆಹೋವನೇ, ಪಾತಾಳದಲ್ಲಿದ್ದು ನಿನ್ನನ್ನು ಕೂಗಿಕೊಳ್ಳುತ್ತೇನೆ.
ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.
ಎಫ್ರಾಯೀಮು ಹೀಗೆ ಪ್ರಲಾಪಿಸಿಕೊಳ್ಳುವುದನ್ನು ಕೇಳಿದ್ದೇನೆ, ‘ನೀನು ನನ್ನನ್ನು ಶಿಕ್ಷಿಸಿದ್ದಿ, ಪಳಗದ ಹೋರಿಯಂತೆ ಶಿಕ್ಷೆಯನ್ನು ಅನುಭವಿಸಿದೆನು. ನನ್ನನ್ನು ತಿರುಗಿಸು, ನೀನು ತಿರುಗಿಸಿದ ಹಾಗೆ ತಿರುಗುವೆನು; ನೀನು ನನ್ನ ದೇವರಾದ ಯೆಹೋವನಲ್ಲವೆ.
¶ ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.
‹ಹಾಗೆಯೇ ನಾನು ನಿಮಗೆ ಹೇಳುವುದೇನಂದರೆ, ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು.›
“ಯೇಸುವೇ ನೀನು ನಿನ್ನ ರಾಜ್ಯವನ್ನು ಪಡೆದವನಾಗಿ ಬರುವಾಗ ನನ್ನನ್ನು ನೆನಪಿಸಿಕೋ” ಅಂದನು.
ಆದರೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದೆಂದು ದೇವರು ಹೇಳುತ್ತಾನೆ” ಎಂಬುದೇ.
¶ ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ, “ನೀನು ಎದ್ದು ದಕ್ಷಿಣದ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ” ಎಂದು ಹೇಳಿದನು.
ಈಗ ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ, ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು.
ತರುವಾಯ ಬಾರ್ನಬನು ಸೌಲನನ್ನು ಹುಡುಕುವುದಕ್ಕಾಗಿ ತಾರ್ಸಕ್ಕೆ ಹೋಗಿ ಅವನನ್ನು ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು.
¶ “ನಾನು ಯೆಹೂದ್ಯನು, ಕಿಲಿಕ್ಯದ ತಾರ್ಸದಲ್ಲಿ ಹುಟ್ಟಿದವನು, ಆದರೆ ಈ ಪಟ್ಟಣದಲ್ಲೇ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ, ನಮ್ಮ ಪೂರ್ವಿಕರ ಧರ್ಮಶಾಸ್ತ್ರದಲ್ಲಿ ಪೂರ್ಣ ಶಿಕ್ಷಣವನ್ನು ಪಡೆದವನು; ನೀವೆಲ್ಲರೂ ಈಹೊತ್ತು ದೇವರ ವಿಷಯದಲ್ಲಿ ಅಭಿಮಾನಿಗಳಾಗಿರುವಂತೆಯೇ, ನಾನೂ ಅಭಿಮಾನಿಯಾಗಿದ್ದೆನು.