ಆದಿಕಾಂಡ 19:11
TSK
ಇದಲ್ಲದೆ ಅವರು ಮನೆಯ ಹೊರಗಿದ್ದ ಮನುಷ್ಯರಿಗೆ ಚಿಕ್ಕವರಿಗೂ ದೊಡ್ಡವರಿಗೂ ಕೂಡ ಕಣ್ಣು ಮೊಬ್ಬಾಗುವಂತೆ ಮಾಡಿದ್ದರಿಂದ ಅವರು ಬಾಗಿಲು ಯಾವುದೆಂದು ತಿಳಿಯದೆ ಬೇಸರಗೊಂಡರು.
TSK
Treasury of Scripture Knowledge references in ಕನ್ನಡ IRV.
ಇದಲ್ಲದೆ ಅವರು ಮನೆಯ ಹೊರಗಿದ್ದ ಮನುಷ್ಯರಿಗೆ ಚಿಕ್ಕವರಿಗೂ ದೊಡ್ಡವರಿಗೂ ಕೂಡ ಕಣ್ಣು ಮೊಬ್ಬಾಗುವಂತೆ ಮಾಡಿದ್ದರಿಂದ ಅವರು ಬಾಗಿಲು ಯಾವುದೆಂದು ತಿಳಿಯದೆ ಬೇಸರಗೊಂಡರು.
¶ “ಯೆಹೋವನೇ, ಇವನು ನೋಡುವಂತೆ ಇವನ ಕಣ್ಣುಗಳನ್ನು ತೆರೆ” ಎಂದು ಪ್ರಾರ್ಥಿಸಲು ಯೆಹೋವನು ಅವನ ಕಣ್ಣುಗಳನ್ನು ತೆರೆದನು. ಆಗ ಎಲೀಷನ ರಕ್ಷಣೆಗಾಗಿ ಸುತ್ತಣ ಗುಡ್ಡಗಳಲ್ಲಿ ಬಂದು ನಿಂತಿದ್ದ ಅಗ್ನಿಮಯವಾದ ರಥಾರಥಾಶ್ವಗಳು ಆ ಸೇವಕನಿಗೆ ಕಂಡವು.
ಇಗೋ, ಕರ್ತನು ನಿನಗೆ ವಿರುದ್ಧವಾಗಿ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ನೋಡದೆ ಇರುವಿ” ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಕಣ್ಣು ಮೊಬ್ಬಾಗಿ ಕತ್ತಲೆ ಕವಿಯಿತು; ಅವನು ಕೈಹಿಡಿದು ಆಧಾರ ಕೊಡುವವರನ್ನು ಹುಡುಕುತ್ತಾ ತಿರುಗಾಡಿದನು.