ಶೆಕೆಮಿನವರಿಗಾದರೋ ಅವರ ದುಷ್ಟತನವನ್ನು ಅವರ ತಲೆಯ ಮೇಲೆಯೇ ಬರಮಾಡಿದನು. ಹೀಗೆ ಯೆರುಬ್ಬಾಳನ ಮಗನಾದ ಯೋತಾಮನು ಇವರ ವಿಷಯದಲ್ಲಿ ನುಡಿದ ಶಾಪವು ನೆರವೇರಿತು.
TSK
TSK · ಆಮೋಸ 1:4
Treasury of Scripture Knowledge references in ಕನ್ನಡ IRV.
¶ ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ರಥಾಶ್ವಬಲಗಳಿಂದ ಕೂಡಿದ ಮೂವತ್ತೆರಡು ಅರಸರೊಂದಿಗೆ ಹೊರಟು ಬಂದು ಸಮಾರ್ಯ ಪಟ್ಟಣಕ್ಕೆ ಮುತ್ತಿಗೆ ಹಾಕಿ ಯುದ್ಧಮಾಡಿದನು.
¶ ಒಮ್ಮೆ ಎಲೀಷನು ದಮಸ್ಕಕ್ಕೆ ಹೋದನು. ಆಗ ಅರಾಮ್ಯರ ಅರಸನಾದ ಬೆನ್ಹದದನು ಅಸ್ವಸ್ಥನಾಗಿದ್ದನು. “ದೇವರ ಮನುಷ್ಯನು ಬಂದಿದ್ದಾನೆ” ಎಂಬ ವರ್ತಮಾನವನ್ನು ಅರಸನು ಕೇಳಿ,
ಯೆಹೋವಾಹಾಜನ ಮಗನಾದ ಯೆಹೋವಾಷನು ತನ್ನ ತಂದೆಯ ಕಾಲದಲ್ಲಿ ಹಜಾಯೇಲನು ಯುದ್ಧಮಾಡಿ ಕಿತ್ತುಕೊಂಡಿದ್ದ ಪಟ್ಟಣಗಳನ್ನು ಬೆನ್ಹದದನಿಂದ ತಿರುಗಿ ತೆಗೆದುಕೊಂಡನು. ಯೋವಾಷನು ಅವನನ್ನು ಮೂರು ಸಾರಿ ಸೋಲಿಸಿ ಇಸ್ರಾಯೇಲರ ಎಲ್ಲಾ ಪಟ್ಟಣಗಳನ್ನು ಹಿಂದಕ್ಕೆ ತೆಗೆದುಕೊಂಡನು.
ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇಮಿನ ಉಪ್ಪರಿಗೆಗಳನ್ನು ದಹಿಸಿಬಿಡುವುದು, ಆರುವುದೇ ಇಲ್ಲ’” ಎಂದು ಹೇಳಿದನು.
¶ “‘ನಾನು ಐಗುಪ್ತಕ್ಕೆ ಬೆಂಕಿ ಹಚ್ಚಿ ಅದರ ಸಹಾಯಕರನ್ನೆಲ್ಲಾ ನಾಶಮಾಡಿದ ಮೇಲೆ ನಾನೇ ಯೆಹೋವನು’ ಎಂದು ಅವರಿಗೆ ಗೊತ್ತಾಗುವುದು.
ಇಸ್ರಾಯೇಲ್ ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ; ಯೆಹೂದವು ಕೋಟೆಕೊತ್ತಲಗಳ ಪಟ್ಟಣಗಳನ್ನು ಮಾಡಿಕೊಂಡಿದೆ; ಆಹಾ, ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಅವರ ಸೌಧಗಳನ್ನು ನುಂಗಿಬಿಡುವುದು.”
ನಾನು ತೂರಿನ ಕೋಟೆಯ ಮೇಲೆ ಬೆಂಕಿಯನ್ನು ಸುರಿಸುವೆನು, ಮತ್ತು ಅದು ಅದರ ಅರಮನೆಗಳನ್ನು ನುಂಗಿಬಿಡುವುದು.”
ನಾನು ರಬ್ಬದ ಕೋಟೆಯನ್ನು ಬೆಂಕಿಯಿಂದ ಉರಿಸುವೆನು, ಅದು ಅದರ ಅರಮನೆಗಳನ್ನು ನುಂಗಿಬಿಡುವುದು; ಆ ಯುದ್ಧದ ದಿನದಲ್ಲಿ ಆರ್ಭಟವಾಗುವುದು, ಆ ಸುಂಟರಗಾಳಿಯಂತ ದಿನದಲ್ಲಿ ಪ್ರಚಂಡ ಕಾದಾಟವೂ ಉಂಟಾಗುವುದು.
ಆದಕಾರಣ ನಾನು ಯೆಹೂದದ ಮೇಲೆ ಬೆಂಕಿಯನ್ನು ಉರಿಸುವೆನು. ಅದು ಯೆರೂಸಲೇಮಿನ ಅರಮನೆಗಳನ್ನು ನುಂಗಿಬಿಡುವುದು.”