TSK

TSK · ಆಮೋಸ 1:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಫಿಲಿಷ್ಟಿಯರು ಯೆಹೋವನಿಗೆ ಸಮರ್ಪಿಸಿದ ಚಿನ್ನದ ಗಡ್ಡೆಗಳು ಅಷ್ಡೋದ್, ಗಾಜಾ, ಅಷ್ಕೆಲೋನ್, ಗತ್ ಊರು, ಎಕ್ರೋನ್ ಎಂಬ ಅವರ ಸಂಸ್ಥಾನಗಳ ಸಂಖ್ಯೆಗಳಿಗೂ

ನಾನು ಅವರ ಎದುರಾಳಿಗಳ ಮೇಲೆ ಕೈಯೆತ್ತಿ, ಅವರ ಶತ್ರುಗಳನ್ನು ಸುಲಭವಾಗಿ ಬಗ್ಗಿಸುವೆನು.

ಎಲೈ, ಎಲ್ಲಾ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದುಹೋಯಿತೆಂದು ಉಲ್ಲಾಸಗೊಳ್ಳದಿರಿ; ಏಕೆಂದರೆ ನಾಗರ ಹಾವಿನ ಸಂತಾನದಿಂದ ವಿಷಸರ್ಪವು ಉಂಟಾಗುವುದು. ಅದರ ಸಂತತಿಯು ಹಾರುವ ಸರ್ಪವೇ.

ಏಕೆಂದರೆ ಆ ದಿನದಲ್ಲಿ ಫಿಲಿಷ್ಟಿಯರೆಲ್ಲರೂ ಸೂರೆಯಾಗುವರು, ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಉಳಿದವರೆಲ್ಲಾ ನಿರ್ಮೂಲವಾಗುವರು; ಕಫ್ತೋರ್ ದ್ವೀಪದವರಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು ಯೆಹೋವನೇ ಸೂರೆಮಾಡುವನು.

¶ ಅಷ್ದೋದಿನ ಅರಮನೆಗಳಲ್ಲಿಯೂ, ಐಗುಪ್ತ ದೇಶದ ಅರಮನೆಗಳಲ್ಲಿಯೂ ಹೀಗೆ ಪ್ರಕಟಿಸಿರಿ, “ಸಮಾರ್ಯದ ಬೆಟ್ಟಗಳಲ್ಲಿ ಕೂಡಿಬನ್ನಿರಿ. ಪಟ್ಟಣದೊಳಗೆ ಇರುವ ಗದ್ದಲವನ್ನು, ಅದರೊಳಗಿರುವ ಹಿಂಸೆಯನ್ನೂ ನೋಡಿರಿ.

ಅಷ್ಡೋದಿನಲ್ಲಿ ಮಿಶ್ರಜಾತಿಯವರು ವಾಸಮಾಡುವರು; ಹೀಗೆ ಫಿಲಿಷ್ಟಿಯದ ಗರ್ವವನ್ನು ಭಂಗಪಡಿಸುವೆನು.