TSK

TSK · ಆಮೋಸ 2:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.

ಆದರೆ ಆ ದೇಶದ ನಿವಾಸಿಗಳು ಬಲಿಷ್ಠರು: ಅವರಿರುವ ಪಟ್ಟಣಗಳು ದೊಡ್ಡದಾಗಿಯೂ, ಕೋಟೆ ಕೊತ್ತಲುಗಳುಳ್ಳದ್ದಾಗಿಯೂ ಇದೆ. ಅದಲ್ಲದೆ ಅಲ್ಲಿ ಉನ್ನತ ಪುರುಷರನ್ನು ನೋಡಿದೆವು.

ಆದರೆ ತನ್ನ ಸೀಮೆಯನ್ನು ದಾಟಿಹೋಗುವುದಕ್ಕೆ ಸೀಹೋನನು ಇಸ್ರಾಯೇಲರಿಗೆ ಅಪ್ಪಣೆಕೊಡದೆ ತನ್ನ ಜನರೆಲ್ಲರನ್ನೂ ಕೂಡಿಸಿಕೊಂಡು ಅವರನ್ನು ಎದುರಿಸುವುದಕ್ಕೆ ಮರುಭೂಮಿಗೆ ಹೊರಟರು. ಅವನು ಯಹಚಕ್ಕೆ ಬಂದು ಅವರೊಡನೆ ಯುದ್ಧಮಾಡಿದನು.

ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿರಿ; ಅಲ್ಲಿ ಹೋಗಿದ್ದ ನಮ್ಮ ಸಹೋದರರು ನಮಗೆ, ‘ಆ ದೇಶದ ಜನರು ನಮಗಿಂತ ಬಲಿಷ್ಠರಾಗಿಯೂ ಮತ್ತು ಎತ್ತರವಾಗಿಯೂ ಇದ್ದಾರೆ. ಅವರಿರುವ ಪಟ್ಟಣಗಳು ದೊಡ್ಡದಾಗಿಯೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳಿಂದ ಇವೆ. ಅಲ್ಲಿ ನಾವು ಎತ್ತರವಾದ ಪುರುಷರನ್ನು ಅಂದರೆ ಅನಾಕೀಮ್ ವಂಶಸ್ಥರ ಮಕ್ಕಳನ್ನು ನೋಡಿದ್ದೇವೆ’ ಎಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ” ಅಂದುಕೊಳ್ಳುತ್ತಿದ್ದಿರಿ.

¶ “ಈಗ ನೀವು ಹೊರಟು ಅರ್ನೋನ್ ಹಳ್ಳವನ್ನು ದಾಟಿರಿ. ಅಮೋರಿಯನಾಗಿರುವ ಹೆಷ್ಬೋನಿನ ಅರಸನಾದ ಸೀಹೋನನು ನಿಮ್ಮಿಂದ ಸೋತುಹೋಗುವನು, ಅವನ ರಾಜ್ಯವು ನಿಮಗೇ ವಶವಾಗಬೇಕೆಂದು ನಾನು ಅನುಗ್ರಹಿಸಿದ್ದೇನೆ. ಅವನೊಡನೆ ಯುದ್ಧಮಾಡಿ, ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರಾರಂಭಿಸಿರಿ.

¶ ಇಸ್ರಾಯೇಲರೇ ಕೇಳಿರಿ, ನಿಮಗಿಂತ ಮಹಾ ಬಲಿಷ್ಠ ಜನಾಂಗಗಳನ್ನೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸ್ವಾಧೀನ ಮಾಡಿಕೊಳ್ಳುವುದಕ್ಕೆ ನೀವು ಈ ಯೊರ್ದನ್ ನದಿಯನ್ನು ಇಂದು ದಾಟಲಿದ್ದೀರಿ.

“ಜೀವಸ್ವರೂಪನಾದ ದೇವರು ನಿಮ್ಮ ಮಧ್ಯದಲ್ಲಿ ಇದ್ದಾನೆಂದು ಆತನು ಕಾನಾನ್ಯರನ್ನು, ಹಿತ್ತಿಯರನ್ನು, ಹಿವ್ವಿಯರನ್ನು, ಪೆರಿಜೀಯರನ್ನು, ಗಿರ್ಗಾಷಿಯರನ್ನು, ಅಮೋರಿಯರನ್ನು, ಯೆಬೂಸಿಯರನ್ನು ನಿಮ್ಮ ಮುಂದೆ ಓಡಿಸಿಬಿಡುವನೆಂದು ನಿಮಗೆ ಗೊತ್ತಾಗುವುದು.

¶ ಅದೇ ಕಾಲದಲ್ಲಿ ಯೆಹೋಶುವನು ಮಲೆನಾಡುಗಳಾದ ಹೆಬ್ರೋನ್, ದೆಬೀರ್, ಅನಾಬ್ ಎಂಬ ಊರುಗಳಲ್ಲಿಯೂ ಯೆಹೂದ ಹಾಗೂ ಇಸ್ರಾಯೇಲ್ ಪ್ರಾಂತ್ಯದ ಬೆಟ್ಟಗಳಲ್ಲಿಯೂ ವಾಸವಾಗಿದ್ದ ಅನಾಕ್ಯರನ್ನು (ಉನ್ನತ ಪುರುಷರು) ನಾಶಮಾಡಿ ಅವರ ಪಟ್ಟಣಗಳನ್ನು ಹಾಳುಮಾಡಿದನು.

ಇಸ್ರಾಯೇಲರ ದೇವರಾದ ಯೆಹೋವನು ಸೀಹೋನನನ್ನೂ, ಅವನ ಜನರೆಲ್ಲರನ್ನೂ ಇಸ್ರಾಯೇಲರ ಕೈಗೆ ಒಪ್ಪಿಸಿದ್ದರಿಂದ ಅವರು ಈ ದೇಶದ ನಿವಾಸಿಗಳಾದ ಅಮೋರಿಯರನ್ನು ಹೊಡೆದು, ಅವರ ದೇಶವನ್ನೆಲ್ಲಾ ಸ್ವಾಧೀನಪಡಿಸಿಕೊಂಡರು.

ಅವನ ವಂಶವೃಕ್ಷದ ಬೇರುಗಳು ಒಣಗುವುದು, ಅದರ ರೆಂಬೆಯು ಮೇಲೆ ಬಾಡುವುದು.

¶ ಈ ಮಾತನ್ನು ನುಡಿ, “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಅದು ಸಮೃದ್ಧವಾಗಿಯೇ ಇರುವುದೋ? ಅದನ್ನು ನಾಟಿದ ಹದ್ದು ಅದರ ಬೇರುಗಳನ್ನು ಕಿತ್ತು, ಅದರ ಫಲವನ್ನು ಕಡಿದುಬಿಡಲು ಅದು ಒಣಗಿ ಅದರ ಹಸುರೆಲೆಗಳೆಲ್ಲಾ ಬಾಡುವುದಲ್ಲವೆ? ಅದು ಬೇರು ಸಹಿತ ಕೀಳಲ್ಪಡುವುದು; ಬಹಳ ಬಲದಿಂದಲ್ಲ, ಬಹಳ ಜನರಿಂದಲ್ಲ.