TSK

TSK · ಆಮೋಸ 3:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದ್ದರಿಂದ ನೀವು ನನ್ನ ಮಾತುಗಳನ್ನು ಶ್ರದ್ಧೆಯಿಂದ ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿಕೊಂಡರೆ, ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗಿರುವಿರಿ. ಸಮಸ್ತ ಭೂಮಿಯು ನನ್ನದೇ.

¶ ಯಾಕೆಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಮೀಸಲಾದ ಪರಿಶುದ್ಧ ಜನರಾಗಿದ್ದೀರಲ್ಲವೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನವಾಗುವುದಕ್ಕೆ ಆರಿಸಿಕೊಂಡನು.

ಯೆಹೋವನೋ ನಿಮ್ಮ ವಿಷಯದಲ್ಲಿ, “ಇವರು ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸುವ ಪಕ್ಷಕ್ಕೆ ನನ್ನ ವಾಗ್ದಾನಕ್ಕೆ ಅನುಸಾರವಾಗಿ ನನಗೆ

ಆತನು ತನ್ನ ವಾಕ್ಯವನ್ನು ಯಾಕೋಬ್ಯರಿಗೆ ತಿಳಿಸುತ್ತಾನೆ, ತನ್ನ ನಿಯಮವಿಧಿಗಳನ್ನು ಇಸ್ರಾಯೇಲರಿಗೆ ಪ್ರಕಟಿಸುತ್ತಾನೆ.

ಇಗೋ, ನಾನು ಉತ್ತರ ದಿಕ್ಕಿನ ರಾಜ್ಯಗಳ ಜನಾಂಗಗಳನ್ನೆಲ್ಲಾ ಕರೆಯುವೆನು; ಅವರು ಬಂದು ಯೆರೂಸಲೇಮಿನ ಊರ ಬಾಗಿಲುಗಳ ಎದುರಿನಲ್ಲಿಯೂ, ಅದರ ಎಲ್ಲಾ ಪೌಳಿಗೋಡೆಗಳ ಸುತ್ತಲೂ, ಯೆಹೂದದ ಸಕಲ ಪಟ್ಟಣಗಳ ಮುಂದೆಯೂ ತಮ್ಮ ತಮ್ಮ ನ್ಯಾಯಾಸನಗಳನ್ನು ಹಾಕಿಕೊಳ್ಳುವರು.

ನಿನ್ನನ್ನು ಅರಿಯದ ಅನ್ಯಜನಾಂಗಗಳ ಮೇಲೆಯೂ, ನಿನ್ನ ನಾಮವನ್ನು ಉಚ್ಚರಿಸದ ವಂಶಗಳ ಮೇಲೆಯೂ ನಿನ್ನ ರೌದ್ರವನ್ನು ಸುರಿದುಬಿಡು. ಅವರು ಯಾಕೋಬ್ಯರನ್ನು ನುಂಗಿ ಹೌದು, ಪೂರಾ ನುಂಗಿಬಿಟ್ಟು ಅವರ ವಾಸಸ್ಥಳವನ್ನು ಹಾಳುಮಾಡಿದ್ದಾರಲ್ಲಾ.

ನಿನ್ನೊಡನೆ ಗೆಳೆಯರಂತೆ ಬಾಳಲು ನೀನು ಅಭ್ಯಾಸಮಾಡಿಸಿದವರನ್ನು ಯೆಹೋವನು ನಿನಗೆ ತಲೆಯಾಗಿ ನೇಮಿಸುವಾಗ ಏನು ಹೇಳುವಿ? ವೇದನೆಯು ನಿನ್ನನ್ನು ಹೆರುವವಳನ್ನೋ ಎಂಬಂತೆ ಹಿಡಿಯುವುದಲ್ಲವೇ.

ಆಗ ಅವರು ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.

ಆಹಾ, ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿ ನಮ್ಮನ್ನೂ, ನಮ್ಮನ್ನಾಳುವ ಅಧಿಪತಿಗಳನ್ನೂ ಕುರಿತು ಗದರಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾನೆ; ಯೆರೂಸಲೇಮಿಗೆ ಆದಂತಹ ಕೇಡು ಭೂಮಂಡಲದಲ್ಲಿ ಎಲ್ಲಿಯೂ ಎಂದೂ ಆಗಲಿಲ್ಲವಲ್ಲಾ.

ಎಫ್ರಾಯೀಮ್ಯರು ಯಜ್ಞಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸಿ ಮಾಂಸಭೋಜನ ಮಾಡುತ್ತಾರೆ; ಯೆಹೋವನು ಆ ಯಜ್ಞಗಳನ್ನು ಮೆಚ್ಚುವುದಿಲ್ಲ; ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಕ್ಕೆ ದಂಡನೆಮಾಡುವನು; ಅವರು ಐಗುಪ್ತಕ್ಕೆ ಹಿಂದಿರುಗಬೇಕಾಗುವುದು.

¶ ಅತಿಸುಂದರಿಯೂ, ಮಂತ್ರತಂತ್ರ ನಿಪುಣಳೂ ಜನಾಂಗಗಳನ್ನು ತನ್ನ ವೇಶ್ಯಾವಾಟಿಕೆಯಿಂದ ಕುಲಗಳನ್ನು ತನ್ನ ಮಂತ್ರತಂತ್ರಗಳಿಂದ ಗುಲಾಮತನಕ್ಕೆ ತಂದವಳೂ ಆದ ವೇಶ್ಯೆಯು ಲೆಕ್ಕವಿಲ್ಲದ ವೇಶ್ಯಾವಾಟಿಕೆಯ ನಿಮಿತ್ತ ಇದೆಲ್ಲಾ ಆಗುವುದು.

¶ ಅನಂತರ ಆತನು ತನ್ನ ಮಹತ್ಕಾರ್ಯಗಳು ಬಹಳವಾಗಿ ನಡೆದ ಊರುಗಳವರು ಮಾನಸಾಂತರಪಡಲಿಲ್ಲವೆಂದು ಅವುಗಳನ್ನು ಗದರಿಸತೊಡಗಿದನು.

ದೇವರು ಒಬ್ಬ ಮನುಷ್ಯನಿಂದ ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ, ಅವರವರು ಇರತಕ್ಕ ಕಾಲಗಳನ್ನೂ ಹಾಗು ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ಅವರನ್ನು ಇರಿಸಿ,

¶ ನ್ಯಾಯವಿಚಾರಣೆಯ ಸಮಯ ಬಂದಿದೆ. ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಗಿದೆಯಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗುವುದಾದರೆ, ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಅಂತ್ಯ ಹೇಗಿರಬಹುದು?