ಆಗ ಯೆಹೋವನು ತನ್ನೊಳಗೆ, “ನಾನು ಮಾಡಬೇಕೆಂದಿರುವ ಕಾರ್ಯವನ್ನು ಅಬ್ರಹಾಮನಿಗೆ ಮರೆಮಾಡುವುದು ಸರಿಯೋ?
TSK
TSK · ಆಮೋಸ 3:7
Treasury of Scripture Knowledge references in ಕನ್ನಡ IRV.
ಅದಕ್ಕೆ ಮೀಕಾಯೆಹುವು “ಅದಿರಲಿ, ಈಗ ಯೆಹೋವನ ವಾಕ್ಯವನ್ನು ಕೇಳು, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಳಲ್ಲಿ ನಿಂತಿದ್ದನ್ನೂ ಕಂಡೆನು.
¶ ಆಗ ಅವರಲ್ಲೊಬ್ಬನು ಅವನಿಗೆ, “ನನ್ನ ಒಡೆಯನಾದ ಅರಸನೇ, ಹಾಗಲ್ಲ, ಇಸ್ರಾಯೇಲರಲ್ಲಿ ಎಲೀಷನೆಂಬ ಒಬ್ಬ ಪ್ರವಾದಿಯಿರುತ್ತಾನೆ. ನೀನು ನಿನ್ನ ಮಲಗುವ ಕೋಣೆಯಲ್ಲಿ ಆಡುವ ಮಾತುಗಳನ್ನು ಸಹ ಅವನು ಅರಿತುಕೊಂಡು ಎಲ್ಲವನ್ನೂ ಇಸ್ರಾಯೇಲರ ಅರಸನಿಗೆ ತಿಳಿಸುತ್ತಾನೆ” ಎಂದನು.
ಆದುದರಿಂದ, ‘ನಾನು ಈ ದೇಶಕ್ಕೆ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮರಣಹೊಂದಿ ಸಮಾಧಿ ಸೇರುವಂತೆ ಆಶೀರ್ವದಿಸುವೆನು’ ಎಂದು ಹೇಳಿದ್ದನ್ನು ತಿಳಿಸಿರಿ” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.
ಯೆಹೋವನು ನನಗೆ ಹೇಳುವುದೇನೆಂದರೆ, “ಬಿಸಿಲಿನಲ್ಲಿ ಜಳಜಳಿಸುವ ಧಗೆಯಂತೆಯೂ, ಸುಗ್ಗಿಯಲ್ಲಿನ ಮಂಜಿನ ಮೋಡದ ಹಾಗೂ ನಾನು ನನ್ನ ವಾಸಸ್ಥಾನದಲ್ಲಿ ಸುಮ್ಮನಿದ್ದು ದೃಷ್ಟಿಸುತ್ತಿರುವೆನು” ಎಂಬುದೇ.
ಆತನು ನನ್ನೊಂದಿಗೆ ಹೀಗೆ ಮಾತನಾಡಿ ಉಪದೇಶಿಸಿದನು, “ದಾನಿಯೇಲನೇ, ನಿನಗೆ ಜ್ಞಾನಬೋಧೆ ಮಾಡುವುದಕ್ಕೆ ಈಗ ಬಂದೆನು.
¶ ನಾನು ಈಗ ಸತ್ಯಾಂಶವನ್ನು ನಿನಗೆ ತಿಳಿಸುವೆನು, “ಇಗೋ, ಪಾರಸಿಯ ದೇಶದಲ್ಲಿ ಇನ್ನು ಮೂವರು ರಾಜರು ಏಳುವರು; ನಾಲ್ಕನೆಯ ರಾಜನು ಎಲ್ಲರಿಗಿಂತಲೂ ಅಧಿಕ ಧನವಂತನಾಗಿರುವನು; ಅವನು ತನ್ನ ಧನದಿಂದ ಪ್ರಬಲನಾಗಿ ಗ್ರೀಕ್ ರಾಜ್ಯಕ್ಕೆ ವಿರುದ್ಧವಾಗಿ ತನ್ನ ಬಲವನ್ನೆಲ್ಲಾ ಎಬ್ಬಿಸುವನು.
¶ ಯೇಸು ಕ್ರಿಸ್ತನ ಪ್ರಕಟನೆಯು, ಆತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ ದೇವರಿಂದ ಈ ಪ್ರಕಟಣೆಯನ್ನು ಹೊಂದಿದನು. ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಆ ಸಂಗತಿಗಳನ್ನು ತನ್ನ ದಾಸನಾದ ಯೋಹಾನನಿಗೆ ತಿಳಿಸಿದನು.
¶ ಆನಂತರ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿರುವ ಒಂದು ಬಾಗಿಲು ಕಾಣಿಸಿತು. ಮೊದಲು ನನ್ನೊಡನೆ ಮಾತನಾಡಿದ ವಾಣಿಯು ತುತ್ತೂರಿಯಂತೆ ಮಾತನಾಡುತ್ತದೋ ಎಂಬಂತೆ ನನಗೆ ಕೇಳಿಸಿತು. ಅದು, ‹“ಇಲ್ಲಿಗೆ ಏರಿ ಬಾ,›‹ಮುಂದೆ ಸಂಭವಿಸಬೇಕಾದವುಗಳನ್ನು ನಿನಗೆ ತೋರಿಸಿ ಕೊಡುವೆನು”› ಎಂದು ಹೇಳಿತು.