TSK

TSK · ಆಮೋಸ 4:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಸಮಾಧಾನಯಜ್ಞದಲ್ಲಿ ಒಪ್ಪಿಸುವ ಪಶುವಿನೊಡನೆ ಹುಳಿರೊಟ್ಟಿಗಳನ್ನು ಸಮರ್ಪಿಸಬೇಕು.

ನಿಮ್ಮ ನಿವಾಸಗಳಿಂದ ತಂದ ಹಿಟ್ಟಿನಲ್ಲಿ ಆರು ಸೇರು ಹಿಟ್ಟಿನಿಂದ ಎರಡು ನೈವೇದ್ಯದ ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋದಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬೇಕು.

ಆದುದರಿಂದ ಇವರು ಹಟಮಾರಿಗಳು; ತಮ್ಮ ಮನಸ್ಸಿನಂತೆ ನಡೆಯಲಿ ಎಂದು ಬಿಟ್ಟುಬಿಟ್ಟೆನು.

ಯೆಹೋವನು ಹೀಗೆನ್ನುತ್ತಾನೆ, “ಲೆಕ್ಕವಿಲ್ಲದ ನಿಮ್ಮ ಯಜ್ಞಗಳು ನನಗೇಕೆ? ಟಗರುಗಳ ಸರ್ವಾಂಗ ಹೋಮ, ಪುಷ್ಟಪಶುಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು. ಹೋರಿ, ಕುರಿಗಳ, ರಕ್ತಕ್ಕೆ ನಾನು ಒಲಿಯೆನು.

ಕಾಡಿನಲ್ಲಿ ದ್ರಾಕ್ಷಿಯ ಹಣ್ಣು ಸಿಕ್ಕಿದಂತೆ ಇಸ್ರಾಯೇಲು ನನಗೆ ಸಿಕ್ಕಿತು; ಹೊಸದಾಗಿ ಫಲಕ್ಕೆ ಬಂದ ಅಂಜೂರದ ಗಿಡದಲ್ಲಿ ಮೊದಲು ಮಾಗಿದ ಹಣ್ಣನ್ನು ಕಂಡ ಹಾಗೆ ನಿಮ್ಮ ಪೂರ್ವಿಕರನ್ನು ಕಂಡೆನು. ಆದರೆ ಅವರು ಬಾಳ್ ಪೆಗೋರಿಗೆ ಬಂದು ಬಾಳ್ ದೇವತೆಯ ಭಕ್ತರಾಗಿ ದೀಕ್ಷೆಗೊಂಡು, ತಾವು ಪ್ರೀತಿಸಿದ ದೇವತೆಯ ಹಾಗೆ ಅಸಹ್ಯರಾದರು.

‹ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಅವರು ಉಪದೇಶವಾಗಿ ಬೋಧಿಸುತ್ತಿರುವುದರಿಂದ ನನ್ನನ್ನು ವ್ಯರ್ಥವಾಗಿ ಆರಾಧಿಸುವರು”› ಎಂಬುದೇ.

‹ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪುದೀನ, ಮರುಗಪತ್ರೆ, ಸಬಸಿಗೆಸೊಪ್ಪು, ಜೀರಿಗೆಗಳಲ್ಲಿ ದಶಮ ಭಾಗವನ್ನು ಕೊಡುತ್ತೀರಿ ಸರಿ, ಆದರೆ ಧರ್ಮಶಾಸ್ತ್ರದಲ್ಲಿ ಮುಖ್ಯವಾದುದನ್ನು ಅಂದರೆ ನ್ಯಾಯವನ್ನೂ, ಕರುಣೆಯನ್ನೂ ನಂಬಿಕೆಯನ್ನೂ ಬಿಟ್ಟುಬಿಟ್ಟಿದ್ದೀರಿ. ಇವುಗಳನ್ನು ಮಾಡಬೇಕು; ಅವುಗಳನ್ನೂ ಬಿಡಬಾರದು.›

ದುರ್ನೀತಿಯ ಎಲ್ಲಾ ವಂಚನೆಯಿಂದಲೂ ಕೂಡಿ ನಾಶದ ಮಾರ್ಗದಲ್ಲಿರುವವರಿಗೋಸ್ಕರವಾಗಿ ಬರುವನು. ಯಾಕೆಂದರೆ ಅವರು ಸತ್ಯವನ್ನು ಪ್ರೀತಿಸದೆ ನಿರಾಕರಿಸಿದ್ದರಿಂದ ರಕ್ಷಣೆಯನ್ನು ಹೊಂದದೆ ನಾಶವಾಗುತ್ತಾರೆ.