ಆದರೆ ಆ ದಿನದಲ್ಲಿ ನಾನೇ, ಭೂಲೋಕದಲ್ಲಿ ಯೆಹೋವನೆಂದು ನೀನು ತಿಳಿದುಕೊಳ್ಳುವಂತೆ ನನ್ನ ಜನರು ವಾಸವಾಗಿರುವ ಗೋಷೆನ್ ಸೀಮೆಯನ್ನು ಪ್ರತ್ಯೇಕಿಸುವೆನು. ಅಲ್ಲಿ ಆ ನೊಣಗಳ ಕಾಟವು ಇರುವುದಿಲ್ಲ.
TSK
TSK · ಆಮೋಸ 4:7
Treasury of Scripture Knowledge references in ಕನ್ನಡ IRV.
ಇಸ್ರಾಯೇಲರು ವಾಸವಾಗಿದ್ದ ಗೋಷೆನ್ ಸೀಮೆಯಲ್ಲಿ ಮಾತ್ರ ಆನೆಕಲ್ಲಿನ ಮಳೆ ಬೀಳಲಿಲ್ಲ.
¶ “ಇಷ್ಟಾದರೂ ನೀವು ನನ್ನ ಮಾತಿಗೆ ಲಕ್ಷ್ಯಕೊಡದೆ ಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟಾಗಿ ನಿಮ್ಮನ್ನು ಶಿಕ್ಷಿಸುವೆನು.
¶ “ಇದನ್ನೆಲ್ಲಾ ನೀವು ಅನುಭವಿಸಿದ ಮೇಲೆಯೂ ಇನ್ನೂ ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ,
ಮೇಲೆ ಆಕಾಶವು ಮಳೆಸುರಿಸದೆ ತಾಮ್ರದಂತೆಯೂ ಮತ್ತು ಕೆಳಗೆ ಭೂಮಿಯು ಬೆಳೆಕೊಡದೆ ಕಬ್ಬಿಣದಂತೆಯೂ ಇರುವವು.
¶ “ಅವರ ಪಾಪಗಳ ನಿಮಿತ್ತವಾಗಿ ಆಕಾಶವು ಮಳೆಗರೆಯದಂತೆ ಮುಚ್ಚಿಕೊಂಡಾಗ ಅವರು ತಮ್ಮ ಪಾಪಗಳನ್ನು ಬಿಟ್ಟು ತಮ್ಮನ್ನು ತಗ್ಗಿಸಿದವನು ನೀನೇ ಎಂದು ನಿನ್ನ ನಾಮವನ್ನು ಸ್ತುತಿಸಿ ಈ ಆಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸುವುದಾದರೆ,
ಅದನ್ನು ಹಾಳುಮಾಡುವೆನು. ದ್ರಾಕ್ಷಿಯ ತೋಟವನ್ನು ಯಾರೂ ಕುಡಿ ಕತ್ತರಿಸಿ ಅಗೆಯುವುದಿಲ್ಲ. ಅದರಲ್ಲಿ ಮುಳ್ಳುಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಅಪ್ಪಣೆ ಕೊಡುವೆನು.
“ಮುಂಗಾರು, ಹಿಂಗಾರು ಅಂತು ಸಕಾಲದ ಮಳೆಯನ್ನು ದಯಪಾಲಿಸಿ, ಸುಗ್ಗಿಯ ಕೆಲವು ವಾರಗಳನ್ನು ನಮಗಾಗಿ ಪ್ರತ್ಯೇಕಪಡಿಸುವ ನಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯಿಡೋಣ” ಎಂದು ಮನದಲ್ಲಿ ಅಂದುಕೊಳ್ಳವುದಿಲ್ಲ.
ದೇಶದಲ್ಲಿ ಮಳೆಯಿಲ್ಲದೆ ಭೂಮಿಯು ಬಿರುಕುಬಿಟ್ಟಿರುವುದರಿಂದ ರೈತರು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.
ಬೆಳೆ ಬೆಳೆಯುವ ಹೊಲವು ಹಾಳಾಗಿದೆ, ನೆಲವು ದುಃಖದಲ್ಲಿ ಮುಳುಗಿದೆ. ಏಕೆಂದರೆ ಧಾನ್ಯವು ನಾಶವಾಗಿದೆ, ಹೊಸ ದ್ರಾಕ್ಷಾರಸವು ಒಣಗಿದೆ, ಎಣ್ಣೆಯು ಕೆಟ್ಟುಹೋಗಿದೆ.
ನಿಮ್ಮ ನಿಮಿತ್ತವೇ ಆಕಾಶವು ಇಬ್ಬನಿಯನ್ನು ತಡೆದುಬಿಟ್ಟಿದೆ, ಭೂಮಿಯು ತನ್ನ ಫಲವನ್ನು ನಿಲ್ಲಿಸಿಬಿಟ್ಟಿದೆ;
‹‘ಇನ್ನೂ ನಾಲ್ಕು ತಿಂಗಳುಗಳಾದ ಮೇಲೆ ಸುಗ್ಗಿಯು ಬರುವುದೆಂದು ನೀವು ಹೇಳುವುದುಂಟಷ್ಟೆ’? ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ. ಅವು ಬಲಿತು ಬೆಳ್ಳಗಾಗಿ ಕೊಯ್ಲಿಗೆ ಸಿದ್ಧವಾಗಿದೆಯೆಂದು ನಿಮಗೆ ಹೇಳುತ್ತೇನೆ.›
ಎಲೀಯನು ನಮಗೆ ಸಮಾನವಾದ ಸ್ವಭಾವವುಳ್ಳವನಾಗಿದ್ದನು, ಅವನು ಮಳೆ ಬರಬಾರದೆಂದು ಭಕ್ತಿಯಿಂದ ಪ್ರಾರ್ಥಿಸಲು ಮೂರು ವರ್ಷ ಆರು ತಿಂಗಳವರೆಗೂ ಭೂಮಿಯ ಮೇಲೆ ಮಳೆ ಬೀಳಲಿಲ್ಲ.