ಇದಲ್ಲದೆ ಬಡವನ ಮೇಲಿನ ಕರುಣೆಯಿಂದ ಪಕ್ಷಪಾತದ ತೀರ್ಮಾನವನ್ನು ಮಾಡಬಾರದು.
TSK
TSK · ಆಮೋಸ 5:12
Treasury of Scripture Knowledge references in ಕನ್ನಡ IRV.
¶ ಪ್ರತಿಯೊಂದು ಕುಲವು ಇರುವ ಪ್ರದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಎಲ್ಲಾ ಊರುಗಳಲ್ಲಿಯೂ, ನ್ಯಾಯಾಧಿಪತಿಗಳನ್ನೂ ಮತ್ತು ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅವರು ಜನರಿಗೋಸ್ಕರ ನ್ಯಾಯವನ್ನು ವಿಚಾರಿಸಿ ಸರಿಯಾದ ತೀರ್ಪುಕೊಡಬೇಕು.
¶ ಬೋವಜನು ಊರಬಾಗಿಲಿನ ಬಳಿಗೆ ಹೋಗಿ ಅಲ್ಲಿ ಕುಳಿತುಕೊಂಡನು. ತಾನು ಹೇಳಿದ್ದ ಸಮೀಪಬಂಧುವು ಆ ಮಾರ್ಗವಾಗಿ ಹೋಗುತ್ತಿದ್ದುದನ್ನು ಕಂಡು, ಬೋವಜನು ಅವನಿಗೆ “ಬಾರಪ್ಪಾ, ಇಲ್ಲಿ ಬಂದು ಕುಳಿತುಕೋ” ಎಂದು ಕರೆಯಲು ಅವನು ಬಂದು ಕುಳಿತುಕೊಂಡನು.
¶ ಇಸ್ರಾಯೇಲರ ಈ ದುರ್ಗತಿಗೆ, ಅವರ ದುರ್ನಡತೆಯೇ ಕಾರಣ. ಹೇಗೆಂದರೆ ಅವರು ತಮ್ಮನ್ನು ಐಗುಪ್ತದ ಅರಸನಾದ ಫರೋಹನ ಕೈಯಿಂದ ಬಿಡಿಸಿ, ಅವನ ರಾಜ್ಯದಿಂದ ಹೊರತಂದ ದೇವರಾದ ಯೆಹೋವನಿಗೆ ಭಯಪಡದೆ, ಪಾಪಮಾಡಿ ಅನ್ಯದೇವತೆಗಳನ್ನು ಸೇವಿಸಿದರು.
ಊರ ಮುಂದಿನ ಚಾವಡಿಗೆ ಹೋದಾಗಲೂ, ಚೌಕದಲ್ಲಿ ಆಸನವನ್ನು ಹಾಕಿಸಿಕೊಂಡಾಗಲೂ
ಪಾಪಿಷ್ಠರ ಪ್ರಾಣದ ಸಂಗಡ ನನ್ನ ಪ್ರಾಣವನ್ನೂ ತೆಗೆಯಬೇಡ; ಕೊಲೆಪಾತಕರ ಜೀವದೊಂದಿಗೆ ನನ್ನ ಜೀವವನ್ನೂ ತೆಗೆಯಬೇಡ.
ನಿನ್ನ ಅಧಿಕಾರಿಗಳು ದ್ರೋಹಿಗಳೂ, ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಪ್ರೀತಿಸಿ, ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸುವುದಿಲ್ಲ; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.
ಬಡವರನ್ನು ನ್ಯಾಯಸ್ಥಾನದಿಂದ ತಳ್ಳಿ, ದಿಕ್ಕಿಲ್ಲದವರಿಗೆ ನ್ಯಾಯವನ್ನು ತಪ್ಪಿಸಿ, ಅನಾಥರನ್ನು ಕೊಳ್ಳೆಹೊಡೆದು, ವಿಧವೆಯರನ್ನು ಸೂರೆಮಾಡಬೇಕೆಂದಿದ್ದಾರೆ.
ಸನ್ಮಾರ್ಗದಲ್ಲಿ ನಡೆದು, ಯಥಾರ್ಥವಾಗಿ ನುಡಿದು, ದೋಚಿಕೊಂಡ ಲಾಭ ಬೇಡವೆಂದು, ಲಂಚಮುಟ್ಟದಂತೆ ಕೈ ಒದರಿ, ಕೊಲೆಯ ಮಾತಿಗೆ ಕಿವಿಗೊಡದೆ, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತಸನ್ನಿಧಾನದಲ್ಲಿ ವಾಸಿಸುವನು.
¶ “ಅವರ ಕೃತ್ಯಗಳಿಗೂ, ಆಲೋಚನೆಗಳಿಗೂ ತಕ್ಕದ್ದನ್ನು ಮಾಡುವೆನು; ನಾನು ಇನ್ನು ಮುಂದೆ ಸಮಸ್ತ ಜನಾಂಗಗಳನ್ನೂ ಸಕಲ ಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು; ಅವರು ಬಂದು ನನ್ನ ಮಹಿಮೆಯನ್ನು ನೋಡುವರು.
ಲೋಕದ ಸೆರೆಯವರನ್ನೆಲ್ಲಾ ತನ್ನ ಕಾಲುಗಳ ಕೆಳಗೆ ತುಳಿದುಬಿಡುವುದೂ,
ಆ ದಿನದಲ್ಲಿ ಶೂರರಲ್ಲಿ ಧೀರನಾದವನು ಬೆತ್ತಲೆಯಾಗಿ ಓಡಿಹೋಗುವನು” ಇದು ಯೆಹೋವನ ನುಡಿ.
ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ.
“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
ಪ್ರವಾದಿಗಳಲ್ಲಿ ನಿಮ್ಮ ಪೂರ್ವಿಕರು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ.
ಇಗೋ, ನಿಮ್ಮ ಹೊಲದಲ್ಲಿನ ಪೈರುಗಳನ್ನು ಕೊಯ್ದದವರ ಕೂಲಿಯನ್ನು ಕೊಡದೆ ವಂಚಿಸಿದಿರಿ. ಆ ಕೂಲಿಯ ಕೂಗು ಹಾಗು ಪೈರು ಕೊಯ್ದದವರ ಕೂಗು ಸೇನಾಧೀಶ್ವರನಾದ ಕರ್ತನ ಕಿವಿಗಳನ್ನು ಮುಟ್ಟಿವೆ.