TSK

TSK · ಆಮೋಸ 5:15

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಮರುದಿನದಲ್ಲಿ ಮೋಶೆಯು ಜನರಿಗೆ, “ನೀವು ಮಹಾ ಪಾಪವನ್ನು ಮಾಡಿರುವಿರಿ. ಆದರೂ ನಾನು ಬೆಟ್ಟವನ್ನು ಹತ್ತಿ ಯೆಹೋವನ ಸನ್ನಿಧಿಗೆ ಹೋಗುವೆನು. ಒಂದು ವೇಳೆ ನೀವು ಮಾಡಿದ ಪಾಪಕೃತ್ಯಕ್ಕೆ ಪ್ರಾಯಶ್ಚಿತ್ತವನ್ನು ನಾನು ಮಾಡಬಹುದೇನೋ” ಎಂದು ಹೇಳಿದನು.

¶ ಆಗ ಅವನ ಸೇವಕರು ಅವನಿಗೆ, “ಇಸ್ರಾಯೇಲರ ಅರಸರು ದಯೆಯುಳ್ಳವರೆಂದು ನಾವು ಕೇಳಿದ್ದೇವೆ. ಆದುದರಿಂದ ಸೊಂಟಕ್ಕೆ ಗೋಣಿತಟ್ಟು ಕಟ್ಟಿಕೊಂಡು ತಲೆಯ ಮೇಲೆ ಹಗ್ಗವನ್ನಿಟ್ಟುಕೊಂಡು ಆ ಅರಸನ ಬಳಿ ಹೋಗುವುದಕ್ಕೆ ನಮಗೆ ಅಪ್ಪಣೆಯಾಗಲಿ. ಹೀಗೆ ಮಾಡುವುದಾದರೆ ಅವನು ನಿನ್ನ ಜೀವವನ್ನು ಉಳಿಸಾನು” ಎಂದು ಹೇಳಿದರು.

¶ ಇಸ್ರಾಯೇಲರು ಯೆಹೋವನಿಗೆ ಅವಿಧೇಯರಾಗಿ ಘೋರಕಷ್ಟವನ್ನು ಅನುಭವಿಸುತ್ತಿದ್ದರು. ಅವರಲ್ಲಿ ಸ್ವತಂತ್ರರೂ, ಪರತಂತ್ರರೂ ನಾಶವಾಗುತ್ತಿದ್ದರೆ, ಅವರನ್ನು ರಕ್ಷಿಸುವವನು ಒಬ್ಬನೂ ಇರಲಿಲ್ಲ.

ಜೀವಸ್ವರೂಪನಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದನೆಯ ಮಾತುಗಳನ್ನು, ನಿನ್ನ ದೇವರಾದ ಯೆಹೋವನು ಕೇಳಿರುವನು. ನಿನ್ನ ದೇವರಾದ ಯೆಹೋವನು ತಾನು ಹೇಳಿದ ಮಾತುಗಳ ನಿಮಿತ್ತ ಮುಯ್ಯಿತೀರಿಸುವನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗಾಗಿಯಾದರೂ ಆತನನ್ನು ಪ್ರಾರ್ಥಿಸು ಎಂಬುದಾಗಿ ಹಿಜ್ಕೀಯನು ಹೇಳುತ್ತಾನೆ” ಎಂದು ಹೇಳಿರಿ ಅಂದನು.

ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನೇ ಮಾಡು; ಸಮಾಧಾನವನ್ನು ಹಾರೈಸಿ ಅದಕ್ಕಾಗಿ ಪ್ರಯತ್ನಪಡು.

ಕೆಟ್ಟದ್ದಕ್ಕೆ ಹೋಗದೆ ಒಳ್ಳೆಯದನ್ನೇ ಮಾಡು; ಆಗ ನೀನು ಯಾವಾಗಲೂ ದೇಶದಲ್ಲಿ ವಾಸವಾಗಿರುವಿ.

ಕೆಟ್ಟತನವನ್ನು ಹಗೆಮಾಡುವವರನ್ನು, ಯೆಹೋವನನ್ನು ಪ್ರೀತಿಸುತ್ತಾನೆ. ಆತನು ತನ್ನ ಭಕ್ತರ ಪ್ರಾಣಗಳನ್ನು ಕಾಯುವವನಾಗಿ, ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು.

ಯೆಹೋವನೇ, ನಿನ್ನನ್ನು ದ್ವೇಷಿಸುವವರನ್ನು ನಾನು ದ್ವೇಷಿಸುತ್ತೇನಲ್ಲವೋ? ನಿನ್ನ ವಿರೋಧಿಗಳಿಗೆ ನಾನು ಬೇಸರಗೊಳ್ಳುವುದಿಲ್ಲವೋ?

ನಾನು ದಂಡನೆಯನ್ನು ನಿರ್ಣಯಿಸಿದ ಆ ಜನಾಂಗದವರು ತಮ್ಮ ಕೆಟ್ಟತನದಿಂದ ತಿರುಗಿಕೊಂಡರೆ, ನಾನು ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.

ಯೆಹೋವನು ಇಂತೆನ್ನುತ್ತಾನೆ, “ಯಾಕೋಬಿನ ನಿಮಿತ್ತ ಹರ್ಷಧ್ವನಿಗೈಯಿರಿ, ಜನಾಂಗಗಳ ಶಿರೋಮಣಿಯ ವಿಷಯದಲ್ಲಿ ಕೇಕೆಹಾಕಿರಿ. ಯೆಹೋವನೇ, ಇಸ್ರಾಯೇಲಿನಲ್ಲಿ ಉಳಿದ ನಿನ್ನ ಜನವನ್ನು ರಕ್ಷಿಸು ಎಂದು ಘೋಷಿಸಿ ಸ್ತುತಿಸಿರಿ.

ಆತನು ಒಂದು ವೇಳೆ ಮನಸ್ಸನ್ನು ಬದಲಾಯಿಸಿ, ನಿಮ್ಮ ಕಡೆಗೆ ತಿರುಗಿಕೊಂಡು ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಯೆಹೋವನಿಗೆ ನೀವು ಅರ್ಪಿಸುವ ನೈವೇದ್ಯವನ್ನು ಸ್ವೀಕರಿಸಿ ಸುವರಗಳನ್ನು ದಯಪಾಲಿಸಬಹುದು.

ಕಂಡ ದೋಷವನ್ನು ಚಾವಡಿಯಲ್ಲಿ ಖಂಡಿಸುವವನ ಮೇಲೆ ಹಗೆತೋರಿಸುತ್ತೀರಿ, ಯಥಾರ್ಥರನ್ನು ದ್ವೇಷಿಸುತ್ತೀರಿ.

ಕುದುರೆಗಳು ಬಂಡೆಯ ಮೇಲೆ ಓಡಾಡುವುವೋ? ಅದನ್ನು ಎತ್ತುಗಳಿಂದ ಉಳುವರೋ? ಆದರೆ ನೀವು ನ್ಯಾಯವನ್ನು ವಿಷವನ್ನಾಗಿ ಮಾಡಿ, ಧರ್ಮದ ಸುಫಲವನ್ನು ಕಹಿಯಾಗಿಸಿದಿರಿ.

ಯಾಕೋಬೇ ನಿನ್ನವರೆಲ್ಲರನ್ನು ಒಂದುಗೂಡಿಸುವೆನು. ಇಸ್ರಾಯೇಲಿನ ಉಳಿದ ಜನರನ್ನು ಒಟ್ಟಿಗೆ ಸೇರಿಸುವೆನು. ಅವರನ್ನು ಹಟ್ಟಿಯಲ್ಲಿನ ಕುರಿಗಳಂತೆ ಒಟ್ಟಿಗೆ ಇಡುವೆನು. ಹುಲ್ಲುಗಾವಲಿನ ಮಧ್ಯದಲ್ಲಿನ ಮಂದೆಯ ಹಾಗೆ ಗುಂಪು ಕೂಡಿಸುವೆನು. ಜನರು ದೊಡ್ಡ ಶಬ್ದಮಾಡುವರು.

ಹೀಗಿರಲು ಪ್ರಸವವೇದನೆ ಪಡತಕ್ಕವಳು ಮಗನನ್ನು ಹೆರುವವರೆಗೂ ನನ್ನ ಜನರು ಶತ್ರುವಶವಾಗಿರುವಂತೆ ಮಾಡುವೆನು. ಅನಂತರ ಆ ಮಗನ ಸಹೋದರರಲ್ಲಿ ಉಳಿದವರು ಇಸ್ರಾಯೇಲರೊಂದಿಗೆ ಹಿಂದಿರುಗುವರು

ಹೇಗೆಂದರೆ ನಾನು ಮಾಡುವುದು ನನಗೇ ತಿಳಿಯುತ್ತಿಲ್ಲ, ಯಾವುದನ್ನು ಮಾಡಬೇಕೆಂದು ನಾನು ಇಚ್ಚಿಸುತ್ತೇನೋ ಅದನ್ನು ಮಾಡದೇ ಅದಕ್ಕೆ ವಿರುದ್ಧವಾದದ್ದನ್ನು ಮಾಡುತ್ತೇನೆ.

ಯಾಕೆಂದರೆ ಶರೀರಭಾವಗಳ ಮೇಲೆ ಮನಸ್ಸಿಡುವುದು ದೇವರಿಗೆ ವಿರುದ್ಧವಾಗಿದೆ; ಅಂಥ ಮನಸ್ಸು ಧರ್ಮನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ.